ಶ್ರೀನಗರ: ಪಾಕಿಸ್ಥಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್-ಇ-ತೋಯ್ಬಾದ ಭಯೋತ್ಪಾದಕನೊಬ್ಬನನ್ನು ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿವೆ ಎಂದು ವರದಿಗಳು ತಿಳಿಸಿವೆ.
ಎಸ್ಜಿಒ ಹಂಡ್ವಾರ, ಎಸ್ಜಿಒ ಬಂಡಿಪೋರಾ, 32 ರಾಷ್ಟ್ರೀಯ ರೈಫಲ್ಸ್, 92 ಸಿಆರ್ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಉಗ್ರನನ್ನು ಬಂಧಿಸಲಾಗಿದೆ. ಬಂಧಿತ ಉಗ್ರನನ್ನು ಶಾಹಿಪೊರದ ಅಕ್ವಿಬ್ ಅಹಮದ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದ್ದು, ಕ್ರಾಲ್ಗುಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಸಂಹಾರ ಮಾಡಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾದ ಘಟನೆಯೂ ನಡೆದಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿಯೂ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಭದ್ರತಾ ಪಡೆಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.