ಶ್ರೀನಗರ: ಭಯೋತ್ಪಾದಕರಿಗೆ ಧನಸಹಾಯ ಒದಗಿಸುವ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮತ್ತು ಕಾಶ್ಮೀರದ ಉತ್ತರ ಜಿಲ್ಲೆಗಳಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತಿದ್ದ ಮೂವರು ಭಯೋತ್ಪಾದಕ ಸಹಚರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬಂಡಿಪೋರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ರಾಹುಲ್ ಮಲಿಕ್ ಅವರು, ಬಂಡಿಪೋರಾದಲ್ಲಿ ಭಯೋತ್ಪಾದಕರಿಗೆ ಹಣಕಾಸು ಒದಗಿಸುತ್ತಿದ್ದ ಜಾಲವನ್ನು ಭೇದಿಸಿದ್ದಾಗಿ ಮಾಹಿತಿಯನ್ನು ನೀಡಿದ್ದಾರೆ.
“ನಾವು ಬಂಧಿತರ ಬಳಿಯಿಂದ ಕನಿಷ್ಠ ಐದು ಲಕ್ಷ ರೂ.ಗಳ ನಗದು ಹಣವನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಅವರ ಖಾತೆಗಳನ್ನು ಸಹ ಪರಿಶೀಲಿಸಿದ್ದೇವೆ, ಖಾತೆಗಳಲ್ಲಿದ್ದ 14 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.
ಬಂಧಿತರು ಕಾಶ್ಮೀರದ ಉತ್ತರ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಸುಮಾರು 9 ಲಕ್ಷ ರೂಪಾಯಿಗಳನ್ನು ವಿನಿಯೋಗ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾನೂನುಗಳ ವಿವಿಧ ವಿಭಾಗಗಳ ಅಡಿಯಲ್ಲಿ ಇವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳು ನಡೆಯುತ್ತಿದ್ದು, ಭದ್ರತಾ ಪಡೆಗಳು ಕಣಿವೆ ರಾಜ್ಯವನ್ನು ಉಗ್ರರಿಂದ ಮುಕ್ತಗೊಳಿಸುವ ಪಣ ತೊಟ್ಟಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.