ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಪಾಕಿಸ್ಥಾನ ಪ್ರೇರಿತ ಉಗ್ರರ ಚಟುವಟಿಕೆಗಳು ಹೆಚ್ಚಾಗಿದ್ದು ಭಾರತೀಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಯೋಧರು ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆವಂತಿಪೋರಾದ ಭಾರ್ಸೋ ಗ್ರಾಮದಲ್ಲಿ ಭದ್ರತಾ ಪಡೆಗಳು ಶೋಧಕಾರ್ಯ ನಡೆಸಿದ್ದವು. ಈ ಸಂದರ್ಭದಲ್ಲಿ ಅಲ್ಲಿ ಉಗ್ರಗಾಮಿಗಳ ತಾಣ ಪತ್ತೆಯಾಗಿದ್ದು, ಅಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರಡೇ ದಿನ ಬಾಕಿ ಇದ್ದು, ಈ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ಥಾನ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಗುಪ್ತಚರ ಇಲಾಖೆಯು ಈ ಹಿಂದೆಯೇ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರು ಚಟುವಟಿಕೆಗಳನ್ನು ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಕಾಶ್ಮೀರದ ಪೊಲೀಸ್ ಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸೇನಾ ಕಾರ್ಯಾಚರಣೆಯ ಮಾಹಿತಿ ತಿಳಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.