ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಘಟನೆಗಳು ನಡೆಯುತ್ತಲೇ ಇದ್ದು, ಇದೀಗ ಶೃಂಗೇರಿಯಲ್ಲಿಯೂ ಮತಾಂಧರಿಂದ ಇಂತಹದ್ದೇ ಒಂದು ಕೃತ್ಯ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಶೃಂಗೇರಿಯ ಶಂಕರ ಸರ್ಕಲ್ನಲ್ಲಿರುವ ಶ್ರೀ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ಡಿಪಿಐ ಸಂಘಟನೆಯ ಧ್ವಜವನ್ನು ಹಾರಿಸುವ ಮೂಲಕ ಮತಾಂಧ ಶಕ್ತಿಗಳು ಹೊಸ ವಿವಾದವನ್ನು ಸೃಷ್ಟಿಸಿವೆ. ಈ ಸಂಬಂಧ ಜಿಲ್ಲಾ ಪೊಲೀಸ್ ಮುಖ್ಯ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.
ಈ ಸಂಬಂಧ ಶೃಂಗೇರಿಯಲ್ಲಿ ತೀವ್ರ ಪ್ರತಿಭಟನೆಯು ನಡೆದಿದ್ದು, ದೇಶದ್ರೋಹಿ ಕೃತ್ಯ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಟ್ಟಣ ಪಂಚಾಯತ್ ಸದಸ್ಯ ರಫೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಸಚಿವ ಸಿ.ಟಿ. ರವಿ ಅವರು ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭ ಕರಂದ್ಲಾಜೆ ಅವರೂ ಟ್ವೀಟ್ ಮಾಡಿದ್ದು, ಈ ಘಟನೆಯನ್ನು ಖಂಡಿಸುವುದಾಗಿ ತಿಳಿಸಿದ್ದಾರೆ. ಈ ಕುಕೃತ್ಯದ ಹಿಂದಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Intolerance of SDPI is touching peak!
Anti social elements are inciting people to propagate their sinister agendas.
I condemn the incident of planting SDPI flags on Sri Shankaracharya’s statue at Sringeri, serious action will be taken against those who are behind this incident! pic.twitter.com/j1S337SR0Z
— Shobha Karandlaje (@ShobhaBJP) August 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.