ನವದೆಹಲಿ: ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟ ಮತ್ತು ನೋಂದಣಿಯನ್ನು ಬ್ಯಾಟರಿಗಳಿಲ್ಲದೆ ಅನುಮತಿಸಬೇಕೆಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಸಾರಿಗೆ ಅಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ.
ಎಲೆಕ್ಟ್ರಿಕ್ ದ್ವಿಚಕ್ರ ಅಥವಾ ತ್ರಿಚಕ್ರ ವಾಹನಗಳು ಒಟ್ಟು ವೆಚ್ಚದ ಶೇಕಡಾ 30-40ರಷ್ಟು ಬ್ಯಾಟರಿಯ ವೆಚ್ಚವನ್ನು ಹೊಂದಿರುವುದರಿಂದ, ಈ ಕ್ರಮವು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವಲ್ಲಿ ಗಮನಾರ್ಹವಾದ ಉತ್ತೇಜನಕ್ಕೆ ಕಾರಣವಾಗಬಹುದು. ಎಲೆಕ್ಟ್ರಿಕ್ ವಾಹನದ ವೆಚ್ಚವನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡಬಹುದು, ಇದರಿಂದಾಗಿ ಅವುಗಳು ಹೆಚ್ಚು ಕೈಗೆಟುಕುವಂತಾಗುತ್ತವೆ ಎಂದು ವರದಿಗಳು ತಿಳಿಸಿವೆ.
ಹೀರೋ ಎಲೆಕ್ಟ್ರಿಕ್ ವ್ಯವಸ್ಥಾಪಕ ನಿರ್ದೇಶಕ ನವೀನ್ ಮುಂಜಾಲ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ನೀತಿಯು ಸ್ವಾಗತಾರ್ಹ ಕ್ರಮವಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎಲೆಕ್ಟ್ರಿಕ್ ವೆಹ್ಹಿಕಲ್ ಅನ್ನು ಪ್ರವೇಶಿಸುವಂತೆ ಮಾಡುವಲ್ಲಿ ಇರುವ ಸಾಧ್ಯತೆಗಳ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ನಮಗೆ ಬೇಕಾಗಿರುವುದು ಅಂತಹ ಪ್ರವರ್ತಕ ನೀತಿಗಳ ಸಂಯೋಜನೆಯಾಗಿದೆ. ಇದು ದೀರ್ಘಾವಧಿಯಲ್ಲಿನ ಯೋಜನೆಯಂತೆ ಕೆಲಸ ಮಾಡುತ್ತದೆ” ಎಂದಿದ್ದಾರೆ.
ಕಂಪನಿ ಅಥವಾ ಇಂಧನ ಸೇವಾ ಪೂರೈಕೆದಾರರು ಯಾವಾಗಲೂ ಬ್ಯಾಟರಿಯನ್ನು ಮಾರಾಟ ಮಾಡಬಹುದು ಅಥವಾ ಗುತ್ತಿಗೆ / ಚಂದಾದಾರಿಕೆ ಮಾದರಿಯೊಂದಿಗೆ ಇದನ್ನು ಬಳಸಿಕೊಳ್ಳಬಹುದು. ಇದು ವಿದ್ಯುತ್ ದ್ವಿ ಮತ್ತು ತ್ರಿಚಕ್ರ ವಾಹನಗಳಿಗೆ ಮಾತ್ರ ಸಂಬಂಧಿಸಿದೆ. ಸರ್ಕಾರದ ನಿರ್ದೇಶನ ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರುಗಳು ಅಥವಾ ಎಲೆಕ್ಟ್ರಿಕ್ ಬಸ್ಸುಗಳಿಗೆ ಅನ್ವಯವಾಗುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.