ನವದೆಹಲಿ: ದೇಶದಲ್ಲಿ ಕೊರೋನಾ ಆರಂಭವಾದಾಗಿನಿಂದ ಈ ವರೆಗೆ ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 3.04 ಕೋಟಿಗಳಷ್ಟು ಎನ್95 ಮಾಸ್ಕ್, 1.28 ಕೋಟಿಗಳಷ್ಟು ಪಿಪಿಇ ಕಿಟ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೊರೋನಾ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧ ಪಟ್ಟಂತೆ ಪೂರಕ ಕ್ರಮ ತೆಗೆದುಕೊಳ್ಳುವುದಕ್ಕೂ ಕೇಂದ್ರ ಸರ್ಕಾರ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು ನೀಡಿರುವುದಾಗಿಯೂ ಸಚಿವಾಲಯ ಹೇಳಿದೆ. 10.83 ಕೋಟಿಗಳಷ್ಟು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ, 22,533 ಸ್ವದೇಶೀ ವೆಂಟಿಲೇಟರ್ಗಳನ್ನು ವಿತರಣೆ ಮಾಡುವ ಮೂಲಕ ಒಗ್ಗಟ್ಟಾಗಿ ಕೊರೋನ ವಿರುದ್ಧ ಹೋರಾಟ ನಡೆಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ವಿವಿಧ ಸಚಿವಾಲಯಗಳ ಸಹಯೋಗದೊಂದಿಗೆ ಈ ಎಲ್ಲಾ ನೆರವನ್ನು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದೆ. ಆರಂಭದಲ್ಲಿ ಈ ಸಂಬಂಧ ಅಗತ್ಯವಾಗಿದ್ದ ವೈದ್ಯಕೀಯ ಉಪಕರಣಗಳು ದೇಶದಲ್ಲಿ ತಯಾರಾಗುತ್ತಿರಲಿಲ್ಲ. ಆದರೆ ಕೊರೋನಾ ಸಂದರ್ಭದಲ್ಲಿ ಅನೇಕ ವೈದ್ಯಕೀಯ ಸಲಕರಣೆಗಳನ್ನು ದೇಶದಲ್ಲಿಯೇ ತಯಾರು ಮಾಡುವಂತಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಜೊತೆಗೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿಯೇ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.