ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವೃತ್ತಿಜೀವನದ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ, ದೀರ್ಫಕಾಲ ಅಧಿಕಾರ ನಡೆಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಟಲ್ ಬಿಹಾರ ವಾಜಪೇಯಿ ಅವರು 2,268 ದಿನಗಳ ಕಾಲ ಅಧಿಕಾರ ನಡೆಸಿದ್ದರು. ಇದೀಗ 67 ರ ಹರೆಯದ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಇಂದು, ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿಯಾಗಿಯೂ ಹೊರಹೊಮ್ಮಿದ್ದಾರೆ. ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಭಾರತದ ಪ್ರಧಾನ ಮಂತ್ರಿಯಾಗಿ 16 ವರ್ಷ 286 ದಿನಗಳ ಕಾಲ ಸೇವೆ ಸಲ್ಲಿಸಿದ್ದರು. ಅವರ ಮಗಳು ಇಂದಿರಾ ಗಾಂಧಿ 11 ವರ್ಷ 59 ದಿನಗಳ ಅವಧಿಯೊಂದಿಗೆ ಎರಡನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಭಾರತೀಯ ಪ್ರಧಾನಿ. ಮನಮೋಹನ್ ಸಿಂಗ್ ಅವರು ಭಾರತದ ಪ್ರಧಾನ ಮಂತ್ರಿಯಾಗಿ 10 ವರ್ಷ 4 ದಿನಗಳ ಕಾಲ ಅಧಿಕಾರದಲ್ಲಿದ್ದರು.
ಪ್ರಧಾನಿ ಮೋದಿ ಅವರು ಭಾರತೀಯ ಪ್ರಧಾನಿಯಾಗಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ 303 ಸ್ಥಾನಗಳ ಬಹುಮತದೊಂದಿಗೆ ಎರಡನೇ ಬಾರಿಗೆ ಗೆದ್ದು ಅಧಿಕಾರ ನಡೆಸುತ್ತಿದೆ.
ಇದಕ್ಕೂ ಮುನ್ನ ಆಗಸ್ಟ್ 5 ರಂದು ಪಿಎಂ ಮೋದಿ ಅವರು ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿ, ಮೂರು ದಾಖಲೆಗಳನ್ನು ಮಾಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪ್ರಧಾನಿ ಟ್ವಿಟರ್ನಲ್ಲಿ 50 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿ ಹೊಸ ದಾಖಲೆ ನಿರ್ಮಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.