ನವದೆಹಲಿ: ಜಗತ್ತಿಗೇ ಕೊರೋನಾ ಸೋಂಕು ಸಂಕಷ್ಟದ ಪರಿಸ್ಥಿತಿಯನ್ನು ತಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಭಾರತ ಮಾಲ್ಡೀವ್ಸ್ಗೆ ನಿರಂತರ ನೆರವು ನೀಡುತ್ತಿದೆ. ಇದಕ್ಕಾಗಿ ಆ ದೇಶ ಮೋದಿ ಮತ್ತು ಭಾರತಕ್ಕೆ ಕೃತಜ್ಞತೆಯನ್ನು ಅರ್ಪಣೆ ಮಾಡಿದೆ. ಈ ಸಂದರ್ಭದಲ್ಲಿ, ಕೊರೋನಾ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರ ನೀಡುವುದನ್ನು ಭಾರತ ಮುಂದುವರೆಸಲಿದೆ ಎಂದು ಪ್ರಧಾನಿ ಮೋದಿ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಎರಡೂ ದೇಶಗಳ ನಡುವಿನ ಸ್ನೇಹ ಸಂಬಂಧ ಹಿಂದೂ ಮಹಾ ಸಾಗರದಷ್ಟು ಆಳವಾಗಿರಲಿದೆ. ನಿಮ್ಮ ಸ್ನೇಹಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಹಾಗೆಯೇ ಮಾಲ್ಡೀವ್ಸ್ಗೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಭಾರತ ಬೆಂಬಲವನ್ನು ನೀಡುವುದನ್ನು ಮುಂದುವರಿಸಲಿರುವುದಾಗಿಯೂ ತಿಳಿಸಿದ್ದಾರೆ.
ಈ ಹಿಂದೆ ಮಾಲ್ಡೀವ್ಸ್ 250 ಮಿಲಿಯನ್ ಯುಎಸ್ ಡಾಲರ್ ಬಜೆಟ್ ನೆರವು, ಗ್ರೇಟರ್ ಮೇಲ್ ಕನೆಕ್ಟಿವಿಟಿ ಯೋಜನೆಗಾಗಿ 500 ಡಾಲರ್ಗಳನ್ನು ಭಾರತದಿಂದ ಪಡೆದುಕೊಂಡಿದ್ದು, ಇದು ಎರಡೂ ದೇಶಗಳ ಸಹಕಾರ ಮನೋಭಾವಕ್ಕೆ ಸಂಬಂಧಿಸಿದಂತೆ ಮಹತ್ವದ ಹೆಗ್ಗುರುತಾಗಿದೆ. ಈ ನೆರವನ್ನು ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಭಾರತೀಯರಿಗೆ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯೆ ನೀಡಿ ಬೆಂಬಲ ಮುಂದುವರಿಸುವ ಭರವಸೆ ನೀಡಿದ್ದಾರೆ.
Thank you, President @ibusolih! India will continue to support the Maldives in mitigating the economic impact of the COVID-19 pandemic. Our special friendship is, and will always remain, as deep as the waters of the Indian Ocean. https://t.co/nbKL19hw7P
— Narendra Modi (@narendramodi) August 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.