ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಆತ್ಮನಿರ್ಭರತ ಸಪ್ತಾಹ’ದ ಅಂಗವಾಗಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ರಕ್ಷಣೆಯಲ್ಲಿ ಮೇಕ್ ಇನ್ ಇಂಡಿಯಾಗೆ ಅವಕಾಶಗಳು (Opportunities For Make In India In Defence) ಎಂಬ ಪೋರ್ಟಲ್ ಅನ್ನು ಪ್ರಾರಂಭಿಸಿದರು. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ.
ಇದಕ್ಕೂ ಮುನ್ನ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಂಕರ್ಸ್ ಕ್ಷಿಪಣಿ ಪರೀಕ್ಷಾ ಸಲಕರಣೆ ಮತ್ತು ಕೊಂಕರ್ಸ್ ಲಾಂಚರ್ ಟೆಸ್ಟ್ ಸಲಕರಣೆಗಳನ್ನು ಬಿಡುಗಡೆ ಮಾಡಿದರು. ಇವುಗಳನ್ನು ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದ್ದು, ಭಾರತ್ ಡೈನಾಮಿಕ್ಸ್ ಲಿಮಿಟೆಡ್ (ಬಿಡಿಎಲ್) ಅಭಿವೃದ್ಧಿಪಡಿಸಿದೆ. ಈ ಉತ್ಪನ್ನಗಳನ್ನು ಈ ಮೊದಲು ರಷ್ಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು.
2020 ರ ಆಗಸ್ಟ್ 7 ರಿಂದ 14 ರವರೆಗೆ ಆಚರಿಸಲಾಗುತ್ತಿರುವ “ಆತ್ಮನಿರ್ಭರ ಭಾರತ” ಸಪ್ತಾಹದ ಅಂಗವಾಗಿ ಈ ಎರಡು ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಕೊಂಕೂರ್ಸ್ – ಎಂ ಆ್ಯಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಗಳ ಸೇವಾ ಸಾಮರ್ಥ್ಯವನ್ನು ಪರೀಕ್ಷಿಸಲು ಕೊಂಕೂರ್ಸ್ ಕ್ಷಿಪಣಿ ಪರೀಕ್ಷಾ ಸಲಕರಣೆ (ಕೆಎಂಟಿಇ) ವಿನ್ಯಾಸಗೊಳಿಸಲಾಗಿದೆ.
ಹೆಚ್ಚಿನ ಸ್ಥಳೀಯ ಉತ್ಪಾದನೆಯೊಂದಿಗೆ ಸ್ವಾವಲಂಬಿ ಭಾರತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ರಾಜನಾಥ್ ಸಿಂಗ್ ಅವರು ಸೋಮವಾರ ‘ಆತ್ಮನಿರ್ಭರ ಭಾರತ ಸಪ್ತಾಹ’ (ಸ್ವಾವಲಂಬಿ ಭಾರತ ವಾರ) ವನ್ನು ಪ್ರಾರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.