ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ಅವರ ನಾಲ್ವರು ಪೂರ್ವವರ್ತಿಗಳ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ವಕೀಲ ಪ್ರಶಾಂತ್ ಭೂಷಣ್ ಅವರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಈ ವಿಷಯದಲ್ಲಿ ಭೂಷನ್ಗೆ ನೀಡಬೇಕಾದ ಶಿಕ್ಷೆಯ ಪ್ರಮಾಣ ಕುರಿತು ಆಗಸ್ಟ್ 20 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ.
“ತುರ್ತು ಪರಿಸ್ಥಿತಿ ಹೇರದೆ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ನಾಶ ಮಾಡಲಾಗಿದೆ ಎಂದು ಕಳೆದ ಆರು ವರ್ಷಗಳನ್ನು ಇತಿಹಾಸಕಾರರು ಹಿಂತಿರುಗಿ ನೋಡಿದರೆ, ಆ ನಾಶದಲ್ಲಿ ಸುಪ್ರೀಂಕೋರ್ಟ್ ನ ಪಾತ್ರವನ್ನು ಸ್ಪಷ್ಟವಾಗಿ ನೋಡಬಹುದು. ಅದರಲ್ಲೂ ಕಳೆದ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಪಾತ್ರ ಇದರಲ್ಲಿ ಅತ್ಯಂತ ದೊಡ್ಡದಾಗಿ” ಎಂದು ಪ್ರಶಾಂತ್ ಭೂಷಣ್ ಟ್ವಿಟ್ ಮಾಡಿದ್ದರು.
ಅಲ್ಲದೇ, ಮತ್ತೊಂದು ಟ್ವೀಟ್ ನಲ್ಲಿ, “ನಾಗ್ಪುರದಲ್ಲಿ ರಾಜಭವನದಲ್ಲಿ ಬಿಜೆಪಿ ನಾಯಕನಿಗೆ ಸೇರಿದ 50 ಲಕ್ಷದ ಬೈಕ್ ನಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದ್ದಾರೆ. ಕೊರೋನಾ ಲಾಕ್ ಡೌನ್ ಎಂದು ಹೇಳಿಕೊಂಡು ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಕ್ಕೆ ರಜೆ ಹಾಕಿ ಮುಖ್ಯ ನ್ಯಾಯಮೂರ್ತಿಗಳು ಬೈಕ್ ನಲ್ಲಿ ಜಾಲಿ ರೈಡ್ ಮಾಡುತ್ತಿದ್ದಾರೆ” ಎಂದಿದ್ದರು.
ಈ ಎರಡು ಟ್ವಿಟ್ಗಳು ಪ್ರಶಾಂತ್ ಭೂಷಣ್ ಅವರನ್ನು ಕಟಕಟೆಗೆ ಎಳೆದು ತಂದಿದೆ, ಅವರನ್ನು ನ್ಯಾಯಾಂಗ ನಿಂದನೆಯಲ್ಲಿ ತಪ್ಪಿತಸ್ಥನಾಗಿ ಮಾಡಿದೆ. ಅವರಿಗೆ ಕ್ರಿಮಿನಲ್ ಕಾನೂನು ನಿಂದನೆಯಡಿ 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.