ನವದೆಹಲಿ: ಭಾರತದ ಜನರಿಗೆ 74 ನೇ ಸ್ವಾತಂತ್ರ್ಯ ದಿನದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಹೊಸ ಯೋಜನೆಯ ಉಡುಗೊರೆ ದೊರೆತಿದೆ.
ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆಯನ್ನು ಈ ಸಂದರ್ಭದಲ್ಲಿ ಘೋಷಣೆ ಮಾಡಿರುವ ಮೋದಿ, ಇದರ ಮುಖಾಂತರ ಕೇಂದ್ರ ಸರ್ಕಾರದಿಂದ ದೇಶದ ಪ್ರತಿಯೊಬ್ಬರಿಗೂ ಹೆಲ್ತ್ ಐಡಿ ನೀಡಲು ಮುಂದಾಗಿದ್ದಾರೆ. ಈ ಹೊಸ ಯೋಜನೆಯಿಂದ ದೇಶದ ಬಡ ಜನರಿಗೆ ಹೆಚ್ಚು ಉಪಯೋಗವಾಗಲಿದೆ ಎಂದು ಮೋದಿ ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಅಥವಾ ಇನ್ನಾವುದೇ ಸಂದರ್ಭದಲ್ಲಿ ವೈದ್ಯರು ಸೂಚಿಸಿರುವ ಮಾಹಿತಿ, ಔಷಧ ಸೇರಿದಂತೆ ಇನ್ನಿತರ ಮಾಹಿತಿಯೂ ಈ ಐಡಿಯ ಜೊತೆಗೆ ಲಿಂಕ್ ಆಗಿರಲಿದ್ದು, ಇದು ಆರೋಗ್ಯ ರಕ್ಷಣೆಗೆ ಸಹಾಯ ಮಾಡಲಿದೆ ಎಂದೂ ಅವರು ಹೇಳಿದ್ದಾರೆ.
ಕಳೆದ ವರ್ಷವೇ ಈ ಯೋಜನೆಗೆ ರೂಪುರೇಶೆಗಳನ್ನು ಹಾಕಿಕೊಳ್ಳಲಾಗಿದ್ದು, ಜನಸಾಮಾನ್ಯರಿಗೆ ಆರೋಗ್ಯ ಮೂಲ ಸೌಕರ್ಯಗಳನ್ನು ಕೈಗೆಟಕುವ ದರಕ್ಕೆ ಒದಗಿಸುವುದೇ ಇದರ ಉದ್ದೇಶವಾಗಿದೆ. ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಇದಾಗಿದ್ದು, ವೈಯಕ್ತಿಕ ಮಾಹಿತಿ ಸುರಕ್ಷತೆ ಹಾಗೂ ಗೌಪ್ಯತೆಯನ್ನೂ ಕಾಪಾಡಲಿದೆ. ಈ ಯೋಜನೆಯು ಅನೇಕ ಯೋಜನೆಗಳನ್ನು ಒಟ್ಟುಗೂಡಿಸಿಕೊಂಡು ಜನರಿಗೆ ಅಗತ್ಯವಾದ ಮಾಹಿತಿ ನೀಡಲು ನೆರವಾಗಲಿದೆ.
ಆರೋಗ್ಯಕ್ಕೆ ಪೂರಕ ಸೇವೆಗಳ ದಕ್ಷತೆ, ಪರಿಣಾಮ ಮತ್ತು ಪಾರದರ್ಶಕತೆ ಹೆಚ್ಚಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಐಡಿ ದೇಶದ ಎಲ್ಲಾ ಸರ್ಕಾರಿ ಆರೋಗ್ಯ ಸೌಲಭ್ಯಗಳ ಜೊತೆಗೆ ಲಿಂಕ್ ಹೊಂದಿರಲಿದ್ದು, ದೇಶದ ಪ್ರತಿಯೊಬ್ಬರೂ ಈ ಡಿಜಿಟಲ್ ಹೆಲ್ತ್ ಐಡಿ ನೀಡಲಾಗುವುದಾಗಿ ನಮೋ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.