ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡುತ್ತಿರುವ ಭಾರತಕ್ಕೆ ಜಗತ್ತಿನ ಮೂಲೆಮೂಲೆಯಿಂದ ಶುಭಾಶಯಗಳು ಹರಿದಬರುತ್ತಿವೆ. ಅಮೆರಿಕದ ಕಾರ್ಯದರ್ಶಿ ಮೈಕ್ ಪಾಂಪಿಯೋ ಅವರು ಕೂಡ ಭಾರತಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವನ್ನು ಶ್ಲಾಘಿಸಿದ ಅವರು, ಉಭಯ ದೇಶಗಳು ಸ್ನೇಹ ಮತ್ತು ಪ್ರಜಾಪ್ರಭುತ್ವದ ಪರಂಪರೆಯನ್ನು ನಿಕಟವಾಗಿ ಹಂಚಿಕೊಳ್ಳುತ್ತವೆ ಎಂದಿದ್ದಾರೆ.
74ನೇ ಸ್ವಾತಂತ್ರ್ಯೋತ್ಸವನ್ನು ಆಚರಣೆ ಮಾಡುತ್ತಿರುವ ಭಾರತಕ್ಕೆ ಅಮೆರಿಕ ಮತ್ತು ಅಮೆರಿಕದ ಜನತೆಯ ಪರವಾಗಿ ಶುಭಾಶಯಗಳು ಎಂದಿದ್ದಾರೆ.
ಕಳೆದ ಹಲವು ವರ್ಷಗಳಿಂದ ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯವು ಸಮಗ್ರ ಜಾಗತಿಕ ಕಾರ್ಯತಾಂತ್ರಿಕ ಪಾಲುದಾರಿಕೆಯಾಗಿ ಪ್ರಗತಿ ಹೊಂದಿದೆ. 21ನೇ ಶತಮಾನದ ಜಾಗತಿಕ ಭದ್ರತೆ ಮತ್ತು ಸಮೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ಉಭಯ ದೇಶಗಳ ಸಹಕಾರ ಹೆಚ್ಚು ನಿಕಟವಾಗಿದೆ ಎಂದಿದ್ದಾರೆ.
ಅಮೆರಿಕ ಮತ್ತು ಭಾರತ ಎರಡೂ ಬಹುತ್ವದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೊಂದಿದೆ, ಜಾಗತಿಕ ಶಕ್ತಿಗಳಾಗಿವೆ ಮತ್ತು ಉತ್ತಮ ಸ್ನೇಹಿತರಾಗಿವೆ ಎಂದು ಅವರು ಹೇಳಿದ್ದಾರೆ. ರಕ್ಷಣೆ, ಭಯೋತ್ಪಾದನೆ ವಿರೋಧಿ ಕಾರ್ಯಾಚರಣೆ, ವ್ಯಾಪಾರ, ಹೂಡಿಕೆ, ಇಂಧನ, ಪರಿಸರ, ಆರೋಗ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಬಾಹ್ಯಾಕಾಶ, ಸಮುದ್ರ ಹೀಗೆ ಉಭಯ ದೇಶಗಳು ಸಾಕಷ್ಟು ವಲಯಗಳಲ್ಲಿ ಪರಸ್ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.