ನವದೆಹಲಿ: ದೇಶದ ಸ್ವಾತಂತ್ರ್ಯ ದಿನದ ಸುಸಂದರ್ಭದಲ್ಲಿ ನವದೆಹಲಿಯ ಇಂಡಿಯಾ ಗೇಟ್ ಬಳಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರಿಗೆ ಗೌರವಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರನ್ನು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಮುಕುಂದ್ ನರವಾಣೆ, ನೌಕಾಪಡೆಯ ಮುಖ್ಯಸ್ಥ ಆಡ್ಮಿರಲ್ ಕರಂಭೀರ್ ಸಿಂಗ್, ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಆರ್.ಕೆ.ಎಸ್. ಬಧೌರಿಯಾ ಅವರು ಸ್ವಾಗತಿಸಿದರು.
ಈ ಸ್ಮಾರಕವನ್ನು ದೇಶಕ್ಕಾಗಿ ಪ್ರಾಣ ತೆತ್ತು ಹುತಾತ್ಮರಾದ ಸೈನಿಕರ ನೆನಪಿಗಾಗಿ ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು.
ಇನ್ನು ಕೊರೋನಾ ಕಾರಣದಿಂದಾಗಿ ದೇಶದೆಲ್ಲೆಡೆ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ನಡೆದಿದೆ. ದೆಹಲಿಯ ಕೆಂಪುಕೋಟೆಯಲ್ಲಿಯೂ ಕೆಲವೇ ಕೆಲವು ಅತಿಥಿಗಳ ಸಮ್ಮುಖದಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.