ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ಸಂದರ್ಭದಲ್ಲಿ ರದ್ದುಗೊಳಿಸಲಾಗಿದ್ದ 4 ಜಿ ಇಂಟರ್ನೆಟ್ ಸೇವೆಗಳನ್ನು ಎರಡು ಜಿಲ್ಲೆಗಳಲ್ಲಿ ವರ್ಷಗಳ ಬಳಿಕ ಮತ್ತೆ ಆರಂಭ ಮಾಡಲಾಗಿದೆ.
ಭಾನುವಾರ ರಾತ್ರಿಯಿಂದ ಉಧಂಪುರ ಮತ್ತು ಗುಂದೇರ್ಬಲ್ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಹೈಸ್ಪೀಡ್ ಇಂಟರ್ನೆಟ್ 4 ಜಿ ಸೇವೆಯನ್ನು ಪುನರಾರಂಭ ಮಾಡಲಾಗಿದೆ. ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ವರ್ಷಗಳ ಹಿಂದೆ ಅಂದರೆ 2019 ಆಗಸ್ಟ್ 5 ರಂದು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ 20 ಜಿಲ್ಲೆಗಳಲ್ಲಿ ಹೈ ಸ್ಪೀಡ್ ಇಂಟರ್ನೆಟ್ ಸೇವೆಯನ್ನೂ ರದ್ದುಗೊಳಿಸಲಾಗಿತ್ತು. ಸದ್ಯ ಭಾನುವಾರ ರಾತ್ರಿಯಿಂದ ಮತ್ತೆ ಈ ಸೇವೆಯನ್ನು 2 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮತ್ತೆ ಆರಂಭಿಸಲಾಗಿದೆ.
ಈ ಕುರಿತಾಗಿ ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠಕ್ಕೂ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಆಗಸ್ಟ್ 15 ರ ಬಳಿಕ ಜಮ್ಮು ಕಾಶ್ಮೀರದ 2 ಜಿಲ್ಲೆಗಳಲ್ಲಿ ಹೈ ಸ್ಪೀಡ್ ಇಂಟರ್ನೆಟ್ ಸೇವೆಯನ್ನು ಆರಂಭಿಸಿ ಸಾಧ್ಯತೆ ಭಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ಸಂಪೂರ್ಣ ರಾಜ್ಯದಕ್ಕೆ ಈ ಸೇವೆಯನ್ನು ವಿಸ್ತರಣೆ ಮಾಡುವುದಾಗಿ ತಿಳಿಸಿತ್ತು. ಹೈ ಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ನೀಡಿದ ಪಕ್ಷದಲ್ಲಿ ಭಯೋತ್ಪಾದಕ ಚಟುವಟಿಕೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆಗಳೂ ಇರುವ ಸಾಧ್ಯತೆಯ ಬಗ್ಗೆಯೂ ಭದ್ರತಾ ಪಡೆಗಳು ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸದ್ಯ ಕೇವಲ 2 ಜಿಲ್ಲೆಗಳಿಗಷ್ಟೇ ಪ್ರಾಯೋಗಿಕ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದೆ. ಭಯೋತ್ಪಾದಕ ಚಟುವಟಿಕೆಗಳು ಕಡಿಮೆ ಇರುವ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ 2 ಜಿ ಸೇವೆ ಮಾತ್ರವೇ ನೀಡಲಾಗುತ್ತಿದೆ ಎಂದೂ ಗೃಹ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.