ಬೆಂಗಳೂರು: ಡಿಜೆ ಹಳ್ಳಿ ,ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಖಾಸಗಿ ಆಸ್ತಿಪಾಸ್ತಿ ಹಾನಿಗೆ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಚಿವರು, ಪೊಲೀಸ್ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಗಲಭೆಯ ಸಂದರ್ಭದಲ್ಲಾದ ಹಾನಿಯ ಸಂಪೂರ್ಣ ನಷ್ಟವನ್ನು ಗಲಭೆಕೋರರಿಂದಲೇ ಭರಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸುವುದಾಗಿಯೂ ಈ ವೇಳೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದೆ. ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುಕೂಲವಾಗುವಂತೆ ಮೂವರು ಸದಸ್ಯರನ್ನೊಳಗೊಂಡ ವಿಶೇಷ ಅಭಿಯೋಜಕರ ತಂಡವೊಂದನ್ನು ರಚಿಸುವುದಕ್ಕೂ ಈ ಸಭೆಯಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಅಗತ್ಯವೆನಿಸಿದಲ್ಲಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗಿನ ಎಲ್ಲಾ ಬೆಳವಣಿಗೆಗಳ ಕುರಿತ ಮಾಹಿತಿಯನ್ನು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ನೀಡಿದ್ದಾರೆ. ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Our Govt has decided to assess the damages caused to public & private property in the violent incidents in KG Halli & DG Halli & recover the costs from the culprits. We will approach Hon’ble High Court for appointment of Claim Commissioner as per Hon’ble Supreme Court order (1/3)
— B.S. Yediyurappa (@BSYBJP) August 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.