ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೋಮವಾರ (ಆಗಸ್ಟ್ 17) ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ) ಅನ್ನು ಶಿಕ್ಷಣ ಸಚಿವಾಲಯ ಎಂಬ ಹೆಸರಿನಲ್ಲಿ ಬದಲಾವಣೆ ಮಾಡುವುದಕ್ಕೆ ಅಂಕಿತ ಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.
ರಾಷ್ಟ್ರಪತಿಗಳ ಅಂಕಿತದ ಬಳಿಕ ಮಾನವ ಸಂಪನ್ಮೂಲ ಸಚಿವಾಲಯ ಈಗ ಶಿಕ್ಷಣ ಸಚಿವಾಲಯವಾಗಿ ಅಧಿಕೃತವಾಗಿ ಬದಲಾಯಿಸಲ್ಪಟ್ಟಿದೆ.
ಜುಲೈನಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನೂಮೋದಿಸಲ್ಪಟ್ಟ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯ ಹಲವು ಶಿಫಾರಸ್ಸುಗಳಲ್ಲಿ ಎಂಎಚ್ಆರ್ಡಿ ಸಚಿವಾಲಯದ ಹೆಸರು ಬದಲಾವಣೆಯು ಕೂಡ ಒಂದಾಗಿದೆ.
ಸೋಮವಾರ, ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ರಾಷ್ಟ್ರಪತಿ ಕೋವಿಂದ್ ಅವರು ಮಾನವ ಸಂಪನ್ಮೂಲ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾಯಿಸಲು ಒಪ್ಪಿಗೆ ನೀಡಿದ್ದಾರೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಶೀರ್ಷಿಕೆ ಶಿಕ್ಷಣ ಸಚಿವಾಲಯವಾಗಿ ಬದಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
1985 ರಲ್ಲಿ, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಶಿಕ್ಷಣ ಸಚಿವಾಲಯವನ್ನು ಮಾನವ ಸಂಪನ್ಮೂಲ ಸಚಿವಾಲಯ ಎಂದು ಮರುನಾಮಕರಣ ಮಾಡಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು 1986 ರಲ್ಲಿ ಪರಿಚಯಿಸಲಾಯಿತು ಮತ್ತು ಕೊನೆಯದಾಗಿ 1992 ರಲ್ಲಿ ತಿದ್ದುಪಡಿ ಮಾಡಲಾಯಿತು.
ಪಿ ವಿ ನರಸಿಂಹ ರಾವ್ ಅವರನ್ನು ಮೊದಲ ಮಾನವ ಸಂಪನ್ಮೂಲ ಸಚಿವರನ್ನಾಗಿ ಪ್ರಧಾನಿ ರಾಜೀವ್ ಗಾಂಧಿ ನೇಮಕ ಮಾಡಿದ್ದರು.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚಿಸಿದ ಸಮಿತಿಯು ಎಚ್ಆರ್ಡಿ ಸಚಿವಾಲಯದ ಹೆಸರನ್ನು ಮತ್ತೆ ಶಿಕ್ಷಣ ಸಚಿವಾಲಯ ಎಂದು ಬದಲಾಯಿಸಬೇಕೆಂದು ಮೊದಲು ಪ್ರಸ್ತಾಪಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.