ನವದೆಹಲಿ: ಇಂಟರ್ನ್ಯಾಷನಲ್ ಸೋಲಾರ್ ಅಲೈಯನ್ಸ್ (ಐಎಸ್ಎ) ಸೆಪ್ಟೆಂಬರ್ 8 ರಂದು ಮೊದಲ ವಿಶ್ವ ಸೌರ ತಂತ್ರಜ್ಞಾನ ಶೃಂಗಸಭೆಯನ್ನು ವರ್ಚುವಲ್ ಪ್ಲಾಟ್ಫಾರ್ಮ್ನಲ್ಲಿ ಆಯೋಜಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶೃಂಗಸಭೆಯ ವಿವರಗಳನ್ನು ಹಂಚಿಕೊಂಡ ಐಎಸ್ಎ ಅಸೆಂಬ್ಲಿಯ ಅಧ್ಯಕ್ಷ ಮತ್ತು ಕೇಂದ್ರ ಆರ್.ಕೆ.ಸಿಂಗ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ವಿಶ್ವ ಸೌರ ತಂತ್ರಜ್ಞಾನ ಶೃಂಗಸಭೆಯ ಉದ್ಘಾಟನಾ ಭಾಷಣ ಮಾಡಲಿದ್ದಾರೆ ಮತ್ತು ಎಲ್ಲಾ ಐಎಸ್ಎ ಸದಸ್ಯ ರಾಷ್ಟ್ರಗಳ ಸಚಿವರುಗಳು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.
ವೈಜ್ಞಾನಿಕ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಪಂಚದ ಉನ್ನತ ಮಟ್ಟದ ಗಣ್ಯರು ಮತ್ತು ಸಿಇಒಗಳು ಇದರಲ್ಲಿ ಭಾಗಿಯಾಗಿ, ಕಡಿಮೆ ವೆಚ್ಚ, ನಾವೀನ್ಯ ಮತ್ತು ಕೈಗೆಟುಕುವ ಸೌರ ತಂತ್ರಜ್ಞಾನಗಳ ಕುರಿತು ಚರ್ಚೆಯನ್ನು ನಡೆಸಲಿದ್ದಾರೆ. ಉದ್ಘಾಟನಾ ಅಧಿವೇಶನದಲ್ಲಿ ಹಿರಿಯ ಸರ್ಕಾರಿ ಅಧಿಕಾರಿಗಳು, ಜಾಗತಿಕ ನಿಗಮಗಳು, ಹಣಕಾಸು ಮತ್ತು ಬಹುಪಕ್ಷೀಯ ಸಂಸ್ಥೆಗಳು, ನಾಗರಿಕ ಸಮಾಜ, ಪ್ರತಿಷ್ಠಾನ ಮತ್ತು ಥಿಂಕ್-ಟ್ಯಾಂಕ್ಗಳ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಡಾ. ಎಂ. ಸ್ಟಾನ್ಲಿ ವೈಟಿಂಗ್ಹ್ಯಾಮ್ ಪ್ರಮುಖ ಭಾಷಣ ಮಾಡಲಿದ್ದಾರೆ. ಸೌರ ಶಕ್ತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಪ್ರಯತ್ನಗಳಿಗೆ ಪ್ರಚೋದನೆಯನ್ನು ನೀಡುವ ಅತ್ಯಾಧುನಿಕ ತಂತ್ರಜ್ಞಾನಗಳ ಜೊತೆಗೆ ಮುಂದಿನ ಪೀಳಿಗೆಯ ತಂತ್ರಜ್ಞಾನಗಳ ಬಗ್ಗೆ ಗಮನ ಸೆಳೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಐಎಸ್ಎ ಸೌರಶಕ್ತಿ ಕುರಿತ ಐಎಸ್ಎ ಜರ್ನಲ್ ಅನ್ನು ಸಹ ಪ್ರಾರಂಭಿಸಲಾಗುವುದು, ಇದರಲ್ಲಿ ವಿಶ್ವದಾದ್ಯಂತದ ಲೇಖಕರು ಸೌರಶಕ್ತಿ ಕುರಿತು ತಮ್ಮ ಲೇಖನಗಳನ್ನು ಪ್ರಕಟಿಸಲಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.