ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಯು ಮತ್ತೊಂದು ಸ್ವರೂಪವನ್ನು ಪಡೆಯಲಾರಂಭಿಸಿದೆ. ಬಂಧಿತರಿಂದ ಪೊಲೀಸರು ಸ್ಪೋಟಕ ಮಾಹಿತಿಗಳನ್ನು ವಿಚಾರಣೆಯ ಸಂದರ್ಭದಲ್ಲಿ ಬಯಲು ಮಾಡಿದ್ದಾರೆ. ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲು ಮತ್ತು ಆಗಿರುವ ನಷ್ಟ ಪರಿಹಾರವನ್ನು ಕಾರಣರಾದವರಿಂದಲೇ ಪಡೆದುಕೊಳ್ಳುವ ನಿಟ್ಟಿನಲ್ಲಿಯೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.
ಈ ಬೆನ್ನಲ್ಲೇ ಈ ಗಲಭೆಯ ಹಿಂದೆ ಎಸ್ಡಿಪಿಐ ಸಂಘಟನೆಯ ಕೈವಾಡ ಇರುವುದು ಕಂಡು ಬಂದಿದ್ದು, ಈ ಗಲಭೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಹೆಬ್ಬಾಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಪಿಎಫ್ಐ, ಎಸ್ಡಿಪಿಐ ನಂತಹ ಸಂಘಟನೆಗಳನ್ನು ನಿಷೇಧ ಮಾಡುವಂತೆ, ಆಗಿರುವ ನಷ್ಟವನ್ನು ಆರೋಪಿಗಳಿಂದಲೇ ಭರಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಗಳಿಗೆ ನ್ಯಾಯ ಒದಗಿಸುವಂತೆಯೂ ತಿಳಿಸಿದ್ದಾರೆ. ಇದೊಂದು ಪೂರ್ವ ಯೋಜಿತ ಗಲಭೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇರುವ ಕಾಣದ ಕೈಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡುವಂತೆಯೂ ಹಿಂಜಾವೇ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.