ಬೆಂಗಳೂರು: ಮುಂದಿನ 10 ವರ್ಷಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಎಲ್ಲಾ ವಿಚಾರಗಳನ್ನು ಸಂಪೂರ್ಣವಾಗಿ ರಾಜ್ಯದಲ್ಲಿ ಅಳವಡಿಸಲು ಗುರಿ ಹೊಂದಲಾಗಿದ್ದು, ಟಾರ್ಗೆಟ್-2030 ಎಂದು ಇದನ್ನು ಪರಿಗಣಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂಬಂಧ ರಚಿಸಲಾಗಿರುವ ಕಾರ್ಯಪಡೆಗಳ ಜೊತೆ ಮಹತ್ವದ ಮಾತುಕತೆ ನಡೆಸಿರುವ ಅವರು, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6 ಸಂಶೋಧನಾ ಮತ್ತು 10 ಬೋಧನಾ ಕೇಂದ್ರಿತ ವಿವಿಗಳನ್ನು, 34 ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಚಿಂತನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಈ ಹೊಸ ಸಂಸ್ಥೆಗಳ ಮೂಲಕ ಗುಣಮಟ್ಟದ ಶಿಕ್ಷಣ, ಸಂಶೋಧನೆಗೆ ಪೂರಕ ಸೌಲಭ್ಯಗಳನ್ನು ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ರಚಿಸಲಾದ ಕಾರ್ಯಪಡೆ ಕರಡು ಪ್ರತಿಯೊಂದನ್ನು ಸರಕಾರದ ಮುಂದಿಡಲಿದೆ. ಆಗಸ್ಟ್ 29 ರ ಒಳಗಾಗಿ ಇದನ್ನು ಜಾರಿಗೊಳಿಸುವ ಕುರಿತ ನೀಲನಕ್ಷೆಯನ್ನು ಸಿದ್ಧಪಡಿಸಿ, ಜಾರಿಗೊಳಿಸಲು ಬೇಕಾದ ವ್ಯವಸ್ಥೆಗಳತ್ತ ಗಮನ ಹರಿಸಲಾಗುವುದು. ಪ್ರಾಥಮಿಕ, ಪ್ರೌಢ ಶಿಕ್ಷಣ ಹಂತಗಳಲ್ಲಿಯೂ ಅಮೂಲಾಗ್ರ ಬದಲಾವಣೆಯ ಮೂಲಕ ಶಿಕ್ಷಣ ವ್ಯವಸ್ಥೆಗೆ ಹೊಸ ರೂಪ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.