ಭೋಪಾಲ್: ಮಧ್ಯಪ್ರದೇಶದ ಸರ್ಕಾರದಲ್ಲಿನ ಉದ್ಯೋಗಗಳನ್ನು ಮಧ್ಯಪ್ರದೇಶದ ಜನರಿಗೆ ಮಾತ್ರ ನೀಡಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಅಲ್ಲಿನ ಜನರಿಗೆ ಮಾತ್ರ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಚೌವ್ಹಾಣ್ ಸರಕಾರ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಲಾಗಿದೆ.
ಸ್ವಾತಂತ್ರ್ಯೋತ್ಸವ ದಿನಾಚರಣೆಯ ಭಾಷಣದ ಸಂದರ್ಭದಲ್ಲೂ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಸ್ಥಳೀಯ ಯುವಕರಿಗೆ ಸರ್ಕಾರಿ ಉದ್ಯೋಗಗಳು ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.
“ಸ್ಥಳೀಯ ಯುವಕರಿಗೆ 10 ಮತ್ತು 12ನೇ ತರಗತಿಯ ಅಂಕಪಟ್ಟಿಯನ್ನು ಆಧರಿಸಿ ಸರ್ಕಾರಿ ಉದ್ಯೋಗವನ್ನು ಒದಗಿಸುವ ಯಾಂತ್ರಿಕ ವ್ಯವಸ್ಥೆಯನ್ನು ಮಾಡಲಾಗುವುದು” ಇದು ಚೌವ್ಹಾಣ್ ಹೇಳಿದ್ದರು.
MP govt has taken an important decision today. We will be taking necessary legal steps so that government jobs in Madhya Pradesh are only given to the state’s youth: Chief Minister Shivraj Singh Chouhan pic.twitter.com/8fG9djcFo5
— ANI (@ANI) August 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.