ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಇದೀಗ ಚಿಕಿತ್ಸೆಗೆ ಅತ್ಯಗತ್ಯವಾದ ಆಕ್ಸಿಜನ್ನ ಸಮರ್ಪಕ ಪೂರೈಕೆಗಾಗಿ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಆಸ್ಪತ್ರೆಗಳಲ್ಲಿ ಆರಂಭ ಮಾಡಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಅವರು ಬೆಂಗಳೂರು ಕೆಂಪೇಗೌಡ ಕಾಲೇಜು ಆಸ್ಪತ್ರೆಯ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗಾಗಿ ಅಳವಡಿಸಲಾದ ವ್ಯವಸ್ಥೆಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದರು.
ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಗತ್ಯಕ್ಕನುಗುಣವಾಗಿ ಲಿಕ್ವಿಡ್ ಆಕ್ಸಿಜನ್ ಸರಬರಾಜು ಮತ್ತು ಹೊಸ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಿ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದಾಗಿಯೂ ಅವರು ಹೇಳಿದ್ದಾರೆ.
ಹಾಗೆಯೇ, ಆಕ್ಸಿಜನ್ ಕೊರತೆ ಬಾಧಿಸದಂತೆ ತಡೆಯಲು ನಗರದ ಕಿಮ್ಸ್ ಆಸ್ಪತ್ರೆ, ಖಾಸಗಿ ಕಂಪೆನಿಗಳ ಜೊತೆಗೂ ಒಪ್ಪಂದ ಮಾಡಿಕೊಂಡಿದ್ದು, ಅಗತ್ಯವಿರುವ ಆಕ್ಸಿಜನ್ ಅನ್ನು ಶೀಘ್ರ ಪೂರೈಸುವಂತೆಯೂ ಕಂಪೆನಿಗೆ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.