ನವದೆಹಲಿ: ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ತುರ್ತು ಕ್ರೆಡಿಟ್ ಲೈನ್ ಖಾತರಿ ಯೋಜನೆಯಡಿ 1.50 ಲಕ್ಷ ಕೋಟಿ ರೂಪಾಯಿಗಳ ಸಾಲವನ್ನು ಮಂಜೂರು ಮಾಡಿದೆ. ಈಗಾಗಲೇ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ವಿವಿಧ ಕ್ಷೇತ್ರಗಳಿಗೆ, ವಿಶೇಷವಾಗಿ ಎಂಎಸ್ಎಂಇಗಳಿಗೆ ಸಾಲ ನೀಡುವ ಮೂಲಕ ಕೋವಿಡ್ -19 ಕಾರಣದಿಂದಾಗಿ ಹೇರಲಾದ ಲಾಕ್ಡೌನ್ನಿಂದ ಉಂಟಾದ ತೊಂದರೆಯನ್ನು ತಗ್ಗಿಸಲು ಆತ್ಮ ನಿರ್ಭರ ಭಾರತ ಪ್ಯಾಕೇಜ್ನ ಭಾಗವಾಗಿ ಈ ಯೋಜನೆಯನ್ನು ಸರ್ಕಾರ ಘೋಷಿಸಿತು.
ಈ ಯೋಜನೆಯಡಿ ಸಾರ್ವಜನಿಕ ವಲಯದ ಬ್ಯಾಂಕುಗಳು 76 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು ಮಂಜೂರು ಮಾಡಿದ್ದು, ಅದರಲ್ಲಿ 56 ಸಾವಿರ ಕೋಟಿ ರೂಪಾಯಿಗಳನ್ನು ಈಗಾಗಲೇ ವಿತರಿಸಲಾಗಿದೆ. ಖಾಸಗಿ ವಲಯದ ಬ್ಯಾಂಕುಗಳು 74 ಸಾವಿರ 715 ಕೋಟಿ ರೂಪಾಯಿಗಳ ಸಾಲವನ್ನು ಮಂಜೂರು ಮಾಡಿದ್ದು, ಅದರಲ್ಲಿ 45 ಸಾವಿರ ಕೋಟಿ ರೂಪಾಯಿಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಎಚ್ಡಿಎಫ್ಸಿ ಬ್ಯಾಂಕ್ ಲಿಮಿಟೆಡ್ ಈ ಯೋಜನೆಯಡಿ ಉನ್ನತ ಸಾಲ ನೀಡುವ ಬ್ಯಾಂಕುಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.