ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಣ್ಣಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳಿಗೆ ಫೋನ್ ಮೂಲಕವೇ ವೈದ್ಯರನ್ನು ಸಂಪರ್ಕಿಸಿ ಪರಿಹಾರ ಪಡೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ತೀರಾ ತುರ್ತು ಸಂದರ್ಭದಲ್ಲಿ ಮಾತ್ರವೇ ವೈದ್ಯರನ್ನು ನೇರವಾಗಿ ಭೇಟಿಯಾಗಿ ಪರಿಹಾರ ಪಡೆದುಕೊಳ್ಳುವಂತೆಯೂ ಸಚಿವಾಲಯ ಸೂಚಿಸಿದೆ.
ಕೊರೋನಾ ಕಂಟೈನ್ಮೆಂಟ್ ಪ್ರದೇಶಗಳಿಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುವ ಕಣ್ಣಿನ ಆಸ್ಪತ್ರೆಗಳಿಗೆ ಈಗ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರಿಸಿ ಆದೇಶವನ್ನೂ ಹೊರಡಿಸಿರುವ ಕೇಂದ್ರ ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.
ಕಣ್ಣಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವೈದ್ಯರು, ದಾದಿಯರು ಮತ್ತು ರೋಗಿಗಳ ನಡುವೆ ನಿಕಟ ಸಂಪರ್ಕವೇರ್ಪಡುವುದು ಅತ್ಯಗತ್ಯವಾಗಿದ್ದು, ಇದರಿಂದಾಗಿ ಸೋಂಕು ಹರಡುವ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಕಣ್ಣಿನ ಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ಆಸ್ಪತ್ರೆಗಳ ಮೇಲಿನ ನಿರ್ಬಂಧ ಮುಂದುವರಿಸಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಜೊತೆಗೆ ತೀರಾ ಅನಿವಾರ್ಯ ಸಂದರ್ಭದಲ್ಲಿ ಕಣ್ಣಿನ ಸಮಸ್ಯೆ ಇರುವವರಿಗೆ ಚಿಕಿತ್ಸೆ ನೀಡುವ ಮುನ್ನ ರೋಗಿಯ ಕೊರೋನಾ ಪರೀಕ್ಷೆ ನಡೆಸಿ ಸೋಂಕಿಲ್ಲದೆ ಇರುವುದನ್ನು ಖಾತರಿ ಪಡಿಸಿಕೊಳ್ಳುವುದಕ್ಕೂ ಸೂಚಿಸಲಾಗಿದೆ. ಹಾಗೆಯೇ ಔಷಧಗಳ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬರೆದು ಕಳುಹಿಸುವಂತೆ ವೈದ್ಯರಿಗೆ ಸೂಚಿಸಲಾಗಿದೆ. ಹಣ ಪಾವತಿಯನ್ನು ಆನ್ಲೈನ್ ಮೂಲಕ ನಡೆಸುವುದಕ್ಕೂ ಸೂಚಿಸಲಾಗಿದೆ. ಸ್ವಚ್ಛತೆ, ವೈಯಕ್ತಿಕ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆಯೂ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಸೋಂಕಿತರಿಗೆ ಶಸ್ತ್ರಚಿಕಿತ್ಸೆ ನಡೆಸದಂತೆ ಮತ್ತು ಅನಿವಾರ್ಯ ಸಂದರ್ಭದಲ್ಲಿ ಪ್ರತ್ಯೇಕ ವಾರ್ಡ್ಗಳಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡುವಂತೆಯೂ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.