ಬೆಂಗಳೂರು: ರಾಜ್ಯದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಚುವಲ್ ಡೆಸ್ಕ್ ಮಾಹಿತಿ ಕೇಂದ್ರವನ್ನು ಆರಂಭ ಮಾಡಲಾಗಿದೆ.
ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ಸಿಬ್ಬಂದಿಗಳ ನಡುವಿನ ಸಂಪರ್ಕವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಹೊಸ ಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಮಾಹಿತಿ ಕೇಂದ್ರಕ್ಕೆ ವರ್ಚುವಲ್ ರೂಪವನ್ನು ನೀಡಲಾಗಿದೆ.
ಈ ವರ್ಚುವಲ್ ಕೇಂದ್ರದ ಮೂಲಕ ವಿಮಾನಗಳ ಹಾರಾಟ, ಆಗಮನ, ನಿರ್ಗಮನ ಮೊದಲಾದ ವಿಚಾರಗಳಿಗೆ ಸಂಬಂಧಪಟ್ಟಂತೆ ಪೂರಕ ಮಾಹಿತಿಗಳನ್ನು ಪಡೆದುಕೊಳ್ಳಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನ ನಿಲ್ದಾಣದ ನಾಲ್ಕು ಕಡೆಗಳಲ್ಲಿ ಈ ವರ್ಚುವಲ್ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ.
ಈ ಕೇಂದ್ರದ ಮುಂದೆ ಮಾಹಿತಿ ಪಡೆಯಲಿಚ್ಚಿಸುವ ಪ್ರಯಾಣಿಕ ನಿಂತಾಗ ಇದರಲ್ಲಿನ ಸೆನ್ಸಾರ್ ಕಾರ್ಯ ನಿರ್ವಹಿಸಲು ಆರಂಭ ಮಾಡಲಿದೆ. ತಕ್ಷಣವೇ ಅಳವಡಿಸಲಾದ ಪರದೆಯ ಮೇಲೆ ಮಾಹಿತಿ ನೀಡಲು ಸಿಬ್ಬಂದಿಗಳು ಕಾಣಿಸಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಅವರ ಜೊತೆ ಮಾತನಾಡಿ ತಮಗೆ ಅಗತ್ಯವಾದ ಮಾಹಿತಿಗಳನ್ನು ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಪಡೆದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.