ನವದೆಹಲಿ: ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ಲಾಸ್ಟಿಕ್ ಆಟಿಕೆಗಳ ಉತ್ಪಾದನೆಯನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಕಾರ್ಯತಂತ್ರ ಮತ್ತು ನೀತಿಗಳನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪ್ಲಾಸ್ಟಿಕ್ ಆಟಿಕೆಗಳ ಉತ್ಪಾದನಾ ಸಮೂಹಗಳನ್ನು ಅಭಿವೃದ್ಧಿಪಡಿಸಬೇಕು, ನವೀನ ಮತ್ತು ಸೃಜನಶೀಲ ವಿಧಾನಗಳ ಮೂಲಕ ಉತ್ತೇಜಿಸಬೇಕು ಎಂದು ಮೋದಿ ಈ ವೇಳೆ ಹೇಳಿದರು.
ಭಾರತೀಯ ಆಟಿಕೆ ಮಾರುಕಟ್ಟೆಯು ಭಾರಿ ಸಾಮರ್ಥ್ಯವನ್ನು ಹೊಂದಿದೆ ಮತ್ತು ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ‘ವೋಕಲ್ ಫಾರ್ ಲೋಕಲ್’ ಉತ್ತೇಜಿಸುವ ಮೂಲಕ ಉದ್ಯಮದಲ್ಲಿ ಪರಿವರ್ತನೀಯ ಬದಲಾವಣೆಯನ್ನು ತರಬಹುದು ಎಂದು ಪ್ರಧಾನಿ ಅಭಿಪ್ರಾಯಿಸಿದರು.
ತಂತ್ರಜ್ಞಾನ ಮತ್ತು ನಾವೀನ್ಯತೆಗಳ ಬಳಕೆ ಮತ್ತು ಜಾಗತಿಕ ಗುಣಮಟ್ಟವನ್ನು ಪೂರೈಸುವ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವತ್ತ ಗಮನ ಹರಿಸಬೇಕು ಎಂದು ಮೋದಿ ಕರೆ ನೀಡಿದರು.
ಭಾರತೀಯ ಸಂಸ್ಕೃತಿ ಮತ್ತು ನೀತಿ ನಿರೂಪಣೆಯೊಂದಿಗೆ ಹೊಂದಿಕೊಂಡಿರುವ ಆಟಿಕೆಗಳನ್ನು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳಲ್ಲಿ ಶಿಕ್ಷಣ ಸಾಧನಗಳಾಗಿ ಬಳಸಬೇಕು ಎಂದು ಪ್ರಧಾನಿ ಹೇಳಿದರು. ರಾಷ್ಟ್ರೀಯ ಗುರಿಗಳು ಮತ್ತು ಸಾಧನೆಗಳ ಬಗ್ಗೆ ಹೆಮ್ಮೆಯ ಭಾವವನ್ನು ಮೂಡಿಸುವಂತಹ ನವೀನ ವಿನ್ಯಾಸಗಳು ಮತ್ತು ಆಟಿಕೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಭಾರತೀಯ ನೀತಿಗಳು ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸಲು ಆಟಿಕೆ ತಂತ್ರಜ್ಞಾನ ಮತ್ತು ಆನ್ಲೈನ್ ಆಟಗಳು ಸೇರಿದಂತೆ ವಿನ್ಯಾಸದ ಆವಿಷ್ಕಾರಗಳಿಗಾಗಿ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಹ್ಯಾಕಥಾನ್ಗಳನ್ನು ಆಯೋಜಿಸುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು.
ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಗೇಮಿಂಗ್ ರಂಗಕ್ಕೆ ಒತ್ತು ನೀಡುತ್ತಿರುವ ಪ್ರಧಾನಿ, ಭಾರತವು ಈ ವಲಯದಲ್ಲಿನ ಬೃಹತ್ ಸಾಮರ್ಥ್ಯವನ್ನು ಸ್ಪರ್ಶಿಸಬೇಕು ಮತ್ತು ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಥೆಗಳಿಂದ ಪ್ರೇರಿತವಾದ ಆಟಗಳನ್ನು ಅಭಿವೃದ್ಧಿಪಡಿಸುವ ಮೂಲಕ ಅಂತರರಾಷ್ಟ್ರೀಯ ಡಿಜಿಟಲ್ ಗೇಮಿಂಗ್ ಕ್ಷೇತ್ರವನ್ನು ಮುನ್ನಡೆಸಬೇಕು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.