ಲಂಡನ್: ಮಹಾತ್ಮ ಗಾಂಧೀಜಿ ಅವರ ಚಿನ್ನಲೇಪಿತ ಕನ್ನಡಕವನ್ನು ಬ್ರಿಟನ್ನ ಹರಾಜು ಸಂಸ್ಥೆಯೊಂದು 2.54 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದೆ.
ಈಸ್ಟ್ ಬ್ರಿಸ್ಟಲ್ ಆಕ್ಷನ್ಸ್ ಸಂಸ್ಥೆಯು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದು, “4 ವಾರಗಳ ಹಿಂದೆ ನಾವದನ್ನು ಕಂಡುಕೊಂಡಿದ್ದೆವು. ತಮ್ಮ ಚಿಕ್ಕಪ್ಪನಿಗೆ ಗಾಂಧಿಯವರು ನೀಡಿದ ಆ ಕನ್ನಡಕವನ್ನು ವ್ಯಕ್ತಿಯೊಬ್ಬರು ನೀಡಿದ್ದರು” ಎಂದಿದೆ.
“ಅಪೂರ್ವವಾದ ವಸ್ತುಗೆ ಹರಾಜಿನಲ್ಲಿ ಅತ್ಯುತ್ತಮ ಫಲಿತಾಂಶ ಸಿಕ್ಕಿದೆ. ಹರಾಜಿನಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದಗಳು” ಎಂದಿದೆ.
ಮೂಲಗಳ ಪ್ರಕಾರ, ಮಹಾತ್ಮ ಗಾಂಧೀಜಿಯವರು 1920-30ರ ಅವಧಿಯಲ್ಲಿ ಬ್ರಿಟಿಷ್ ಪೆಟ್ರೋಲಿಯಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಗೆ ಈ ಕನ್ನಡಕವನ್ನು ನೀಡಿದ್ದರು ಎಂದು ಹೇಳಲಾಗಿದೆ.
ತಮ್ಮ ಉಪಯೋಗಕ್ಕೆ ಬಾರದ ವಸ್ತುಗಳನ್ನು ಬೇರೆಯವರಿಗೆ ಅಥವಾ ಗತಿ ಇರುವವರೆಗೆ ನೀಡುವ ಪರಿಪಾಠವನ್ನು ಗಾಂಧೀಜಿಯವರು ಹೊಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.