ಶ್ರೀನಗರ: ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ನಿವಾಸ ಪ್ರಮಾಣಪತ್ರಗಳಿಗಾಗಿ ಸಲ್ಲಿಸಲಾದ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಮುಂದಿನ 15 ದಿನಗಳಲ್ಲಿ ಪೂರೈಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಕೇಂದ್ರಾಡಳಿತ ಪ್ರದೇಶದ ಹೊಸದಾಗಿ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು , ನಿವಾಸ ಪ್ರಮಾಣಪತ್ರಗಳ ವಿತರಣೆಯಲ್ಲಿನ ಪ್ರಗತಿಯನ್ನು ಪರಿಶೀಲಿಸಲಾಗಿದ್ದು, ನಿವಾಸ ಪ್ರಮಾಣಪತ್ರಗಳಿಗಾಗಿ ಸಲ್ಲಿಕೆಯಾದ ಆನ್ಲೈನ್ ಅರ್ಜಿಗಳ ಶೇಕಡಾ 90 ರಷ್ಟು ಬಾಕಿ ಇದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 15 ದಿನಗಳೊಳಗೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥಪಡಿಸಿ ನಿವಾಸ ಪ್ರಮಾಣಪತ್ರ ಒದಗಿಸಲಾಗುವುದು ಎಂದಿದ್ದಾರೆ.
ಯಾವುದೇ ಹೆಚ್ಚುವರಿ ದಾಖಲೆಗಳ ಅಗತ್ಯವಿಲ್ಲದೇ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ಹೊಂದಲು ಅರ್ಹರಿಗೆ ಸರಾಗವಾಗಿ ನಿವಾಸ ಪ್ರಮಾಣಪತ್ರಗಳನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ಸಿನ್ಹಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸೆಪ್ಟೆಂಬರ್ 10 ರ ಗಡುವನ್ನು ನಿವಾಸ ಪ್ರಮಾಣಪತ್ರ ಒದಗಿಸಲು ನೀಡಲಾಗಿದೆ, ವಿಳಂಬವನ್ನು ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೇಜವಾಬ್ದಾರಿ ಮತ್ತು ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.