ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದು, ಈ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಚಾರ ಕಾರ್ಯವನ್ನು ಆರಂಭ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಪಕ್ಷ ಪ್ರಚಾರಕ್ಕಾಗಿ ಕಿರು ವಿಡಿಯೋ ಒಂದನ್ನು ನಿರ್ಮಿಸಿದ್ದು, ಇದರಲ್ಲಿ ಕಳೆದ ಬಾರಿ ಅವರು ಭಾರತಕ್ಕೆ ಭೇಟಿ ನೀಡಿದಾಗಿನ ಮೋದಿ ಮಾತುಗಳನ್ನೂ ಬಳಕೆ ಮಾಡಿದ್ದಾರೆ. ಆ ಮೂಲಕ ಅಮೆರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಟ್ರಂಪ್ ಯೊಜನೆ ರೂಪಿಸಿದ್ದಾರೆ.
ಅಮೆರಿಕಾದಲ್ಲಿ ಸುಮಾರು 2 ದಶಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಅನಿವಾಸಿ ಭಾರತೀಯರಿದ್ದು, ಮೋದಿ ಭಾಷಣದ ತುಣುಕುಗಳನ್ನು ಪ್ರಚಾರದಲ್ಲಿ ಬಳಕೆ ಮಾಡುವ ಮೂಲಕ ಅಲ್ಲಿ ವಾಸವಿರುವ ಭಾರತೀಯರ ಮನ ಗೆಲ್ಲುವ ಪ್ರಯತ್ನವನ್ನು ಟ್ರಂಪ್ ಮಾಡುತ್ತಿದ್ದಾರೆ. ಕಳೆದ ಬಾರಿ ಭಾರತ ಭೇಟಿಯ ಸಂದರ್ಭದಲ್ಲಿ ಮೋದಿ ಮಾತನಾಡಿರುವ ಮಾತುಗಳು ಮತ್ತು ಉಭಯ ದೇಶಗಳ ನಡುವಿನ ಬಾಂಧವ್ಯವೂ ಅನಿವಾಸಿ ಭಾರತೀಯರ ವೋಟುಗಳನ್ನು ಪಡೆಯಲು ಪರಿಣಾಮಕಾರಿಯಾಗಲಿದೆ ಎಂದೇ ಹೇಳಲಾಗುತ್ತಿದೆ.
ʼಫೋರ್ ಮೋರ್ ಇಯರ್ಸ್ʼ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋವನ್ನು ತಯಾರಿಸಲಾಗಿದ್ದು, ಇದರಲ್ಲಿ ಹೌಡಿ ಮೋದಿ ಕಾರ್ಯಕ್ರಮದಲ್ಲಿ ನಮೋ-ಟ್ರಂಪ್ ಕೈಕೈ ಹಿಡಿದಿರುವ ದೃಶ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ಒಟ್ಟಾರೆಯಾಗಿ ಅಮೆರಿಕ ದೇಶದ ಚುನಾವಣೆಯಲ್ಲಿಯೂ ಮೋದಿ ಮೇನಿಯಾ ಆರಂಭವಾಗಿದ್ದು, ಅಲ್ಲಿನ ಭಾರತೀಯರನ್ನು ಸೆಳೆಯಲು ಟ್ರಂಪ್ ಅವರು ನಮೋಗೆ ಮೊರೆ ಹೋಗಿದ್ದಾರೆ ಎನ್ನಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.