ಮುಂಬಯಿ: 2019-20ರಲ್ಲಿ 2 ಸಾವಿರ ರೂ.ಗಳ ಕರೆನ್ಸಿ ನೋಟುಗಳನ್ನು ಮುದ್ರಿಸಲಾಗಿಲ್ಲ. ವರ್ಷಗಳಿಂದ ಈ ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಆರ್ಬಿಐನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ.
ಆರ್ಬಿಐ ವಾರ್ಷಿಕ ವರದಿಯ ಪ್ರಕಾರ, ಚಲಾವಣೆಯಲ್ಲಿರುವ 2 ಸಾವಿರ ರೂ ಕರೆನ್ಸಿ ನೋಟುಗಳ ಸಂಖ್ಯೆ 2018 ರ ಮಾರ್ಚ್ ಅಂತ್ಯದ ವೇಳೆಗೆ 33,632 ಲಕ್ಷದಷ್ಟು ಇತ್ತು. ಇದು 2019 ರ ಮಾರ್ಚ್ ಅಂತ್ಯದ ವೇಳೆಗೆ 32,910 ಲಕ್ಷಕ್ಕೆ ಇಳಿದಿದೆ ಮತ್ತು 2020 ರ ಮಾರ್ಚ್ ಅಂತ್ಯದ ವೇಳೆಗೆ 27,398 ಲಕ್ಷಕ್ಕೆ ಇಳಿದಿದೆ.
2020ರ ಮಾರ್ಚ್ ಅಂತ್ಯದ ವೇಳೆಗೆ ಒಟ್ಟು ನೋಟುಗಳ ಪೈಕಿ 2000 ರೂಪಾಯಿ ಮುಖಬೆಲೆಯ ನೋಟುಗಳ ಪ್ರಮಾಣ ಶೇಕಡಾ 2.4 ರಷ್ಟಿತ್ತು, 2019 ರ ಮಾರ್ಚ್ ಅಂತ್ಯದ ವೇಳೆಗೆ ಇದು ಶೇಕಡಾ 3 ಇತ್ತು ಮತ್ತು 2018ರ ಮಾರ್ಚ್ ಅಂತ್ಯದ ವೇಳೆಗೆ ಇದು ಶೇ.3.3 ರಷ್ಟಿತ್ತು.
ಆರ್ಬಿಐ ವರದಿಯು, 2019-20ರ ಅವಧಿಯಲ್ಲಿ 2,000 ರೂ. ಕರೆನ್ಸಿ ನೋಟುಗಳನ್ನು ಮುದ್ರಿಸಲು ಯಾವುದೇ ಇಂಡೆಂಟ್ ಮಾಡಿಲ್ಲ ಮತ್ತು ಬಿಆರ್ಬಿಎನ್ಎಂಪಿಎಲ್ (ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್) ಮತ್ತು ಎಸ್ಪಿಎಂಸಿಐಎಲ್ (ಸೆಕ್ಯುರಿಟಿ ಪ್ರಿಂಟಿಂಗ್ ಆಂಡ್ ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್) ನಿಂದ ಯಾವುದೇ ಹೊಸ ಪೂರೈಕೆ ನಡೆದಿಲ್ಲ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.