ನವದೆಹಲಿ: ಕೋವಿಡ್-19 ರೋಗಿಗಳ ಚೇತರಿಕೆಯ ಪ್ರಮಾಣವು ಸುಧಾರಣೆಯಾಗುತ್ತಲೇ ಇದೆ. ಇಂದು ಅದು ಶೇಕಡಾ 76 ಕ್ಕೆ ತಲುಪಿದೆ. ದೇಶದ 24 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್-19 ನಿಂದ ಯಶಸ್ವಿಯಾಗಿ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರತವು 66 ಸಾವಿರಕ್ಕೂ ಹೆಚ್ಚು ರೋಗಿಗಳ ಚೇತರಿಕೆಯ ದಾಖಲೆಯನ್ನು ನಿರ್ಮಿಸಿದೆ.
ದೇಶದಲ್ಲಿ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಸಕ್ರಿಯ ಪ್ರಕರಣಗಳ ಸಂಖ್ಯೆಗಿಂತ ಶೇ. 3.41 ಪಟ್ಟು ಹೆಚ್ಚಾಗಿದೆ. ಕಳೆದ 25 ದಿನಗಳಲ್ಲಿ ಚೆತರಿಕೆಯಲ್ಲಿ ಶೇಕಡಾ 100 ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. ಪ್ರಕರಣದ ಸಾವಿನ ಪ್ರಮಾಣವು ಸ್ಥಿರವಾದ ಕುಸಿತವನ್ನು ತೋರಿಸುತ್ತಲೇ ಇದೆ ಮತ್ತು ಈಗ ಅದು ಶೇಕಡಾ 1.84 ರಷ್ಟಿದೆ. ದೇಶದ ಸುಮಾರು 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು ಪ್ರಕರಣಗಳ ಸಂಖ್ಯೆ 31 ಲಕ್ಷ 67 ಸಾವಿರ 324 ಕ್ಕೆ ತಲುಪಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಕರೋನಾ ಪ್ರಕರಣಗಳ ಸಂಖ್ಯೆ 7 ಲಕ್ಷ 4 ಸಾವಿರ 348. ಒಂದೇ ದಿನದಲ್ಲಿ 848 ಸಾವುಗಳು ಸಂಭವಿಸಿವೆ. ಒಟ್ಟು ಸಾವಿನ ಸಂಖ್ಯೆ 58 ಸಾವಿರ 390 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ಭಾರತವು ತನ್ನ ಕೋವಿಡ್ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ, 9 ಲಕ್ಷ 25 ಸಾವಿರಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಟ್ಟು ಪರೀಕ್ಷೆಗಳ ಸಂಖ್ಯೆ 3 ಕೋಟಿ 68 ಲಕ್ಷ 27 ಸಾವಿರ 520ಕ್ಕೆ ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.