ನವದೆಹಲಿ: ಯೂಟ್ಯೂಬ್ ವಿಡಿಯೋದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಿದ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಇಸ್ಲಾಂ ಮೂಲಭೂತವಾದಿ ಹೀರ್ ಖಾನ್ ಅನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಖಾನ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈಕೆಯ ಬಂಧನವಾಗಿದೆ. ಉತ್ತರ ಪ್ರದೇಶ ಪೊಲೀಸರು ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇದೀಗ ಆಕೆಯನ್ನು ಬಂಧಿಸಿದ್ದಾರೆ. ವರದಿಯ ಪ್ರಕಾರ, ಖಾನ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು ಎನ್ನಲಾಗಿದ.
“ಬ್ಲ್ಯಾಕ್ ಡೇ 5 ಆಗಸ್ಟ್” ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಲಾದ ವೀಡಿಯೊವೊಂದರಲ್ಲಿ, ಖಾನ್ ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಳೆ. ಸೀತಾ ಮಾತೆಯ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾಳೆ.
ವರದಿಗಳ ಪ್ರಕಾರ, ಹೀರ್ ಖಾನ್ ಕಳೆದ ಎರಡು ವರ್ಷಗಳಿಂದ ಹಿಂದೂ ದೇವರುಗಳನ್ನು ನಿಂದಿಸುತ್ತಲೇ ಬಂದಿದ್ದಾಳೆ. ಇದನ್ನು ಆಕೆಯೇ ಹೇಳಿಕೊಂಡಿದ್ದಾಳೆ. ಎರಡು ವರ್ಷಗಳಿಂದ ಹಿಂದೂ ದೇವತೆಗಳನ್ನು ಅವಮಾನಿಸಿದರೂ ನನ್ನ ವಿರುದ್ದ ಕ್ರಮವನ್ನು ಯಾರೂ ಕೈಗೊಂಡಿಲ್ಲ ಎಂದು ಆಕೆ ದರ್ಪದಿಂದ ಹೇಳಿಕೊಂಡಿದ್ದಾಳೆ ಎನ್ನಲಾಗಿದೆ.
“ಅಲ್ಲಾಹುವನ್ನು ಹೊರತುಪಡಿಸಿ ಬೇರೆ ಯಾರಿಗೂ ಹೆದರುವುದಿಲ್ಲ ಎನ್ನುತ್ತಿದ್ದ ಹೀರಾ ಖಾನ್, ತನ್ನ ವಿರುದ್ಧ ಯುಪಿ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆ ಹೆದರಿ ತಲೆಮರೆಸಿಕೊಳ್ಳುವ ಪ್ರಯತ್ನ ನಡೆಸಿದ್ದಾಳೆ” ಎಂದು ಬಿಜೆಪಿ ಮುಖಂಡ ಶಲಾಭಮಣಿ ತ್ರಿಪಾಠಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.