ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚಿನ ಪರಿಹಾರ ಧನ ಒದಗಿಸುವಂತೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೆಪ್ಟೆಂಬರ್ 12 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
ಕೊರೋನಾ ಸಾಂಕ್ರಾಮಿಕ ಪಿಡುಗಿನಿಂದಾಗಿ ಕರ್ನಾಟಕದ ಆರ್ಥಿಕ ಸ್ಥಿತಿಗತಿ ಹೆಚ್ಚು ಬಲಿಷ್ಠವಾಗಿಲ್ಲ. ಇಂತಹ ಅನಿವಾರ್ಯ ಕಠಿಣ ಸಂದರ್ಭದಲ್ಲಿಯೂ ಪೂರಕ ಅನುದಾನವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಜೊತೆಗೆ ಜಿಎಸ್ಟಿ ಯ ಕರ್ನಾಟಕದ ಪಾಲು 13 ಸಾವಿರ ಕೋಟಿ ರೂ. ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆಯೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಆಗಸ್ಟ್ 27 ರಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿಯೂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿ, ಬೆಳೆಹಾನಿ, ನೆರೆ ಹಾನಿಗೊಳಗಾದ ಜನರಿಗೆ ಕೇಂದ್ರ ಸರ್ಕಾರದಿಂದ ಸಾಲ ತಂದಾದರೂ ಸಹಾಯ ಮಾಡುವುದಾಗಿ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ ರಾಜ್ಯದ ಆರ್ಥಿಕ ಪರಿಸ್ಥಿತಿ ಮುಂದಿನ 2-3 ತಿಂಗಳುಗಳಲ್ಲಿ ಸರಿ ಹೋಗುವ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೊರೋನಾ ಸಂಬಂಧ ವಿರೋಧ ಪಕ್ಷಗಳು ಮಾಡುತ್ತಿರುವ ಎಲ್ಲಾ ಆರೋಪಗಳಿಗೂ ರಾಜ್ಯ ಸರ್ಕಾರ ಸಮರ್ಪಕ ಉತ್ತರವನ್ನು ನೀಡಲಿದೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.