ನವದೆಹಲಿ: ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಸಂಬಂಧ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದೆ.
ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವ ಮೂಲಕ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಪೂರಕ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಭರವಸೆ ನೀಡಿದೆ. ಪರೀಕ್ಷೆ ಮುಂದೂಡುವ ಬದಲು ಪರೀಕ್ಷಾ ಕೇಂದ್ರಗಳ ಹೆಚ್ಚಳ ಕ್ರಮವನ್ನು ಅನುಸರಿಸಲಾಗುವುದು ಎಂದು ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವಾಲಯದಡಿಯ ರಾಷ್ಟ್ರೀಯ ಪರೀಕ್ಷಾ ವಿಭಾಗ ಈ ಅರ್ಹತಾ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿ ವಹಿಸಿದೆ. ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಒತ್ತಾಯ ಬಂದ ಹಿನ್ನೆಲೆಯಲ್ಲಿ ವಿಭಾಗ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆ ಮುಂದೂಡುವುದಿಲ್ಲ. ಬದಲಾಗಿ ಜೆಇಇ 570 ಪರೀಕ್ಷಾ ಕೇಂದ್ರಗಳನ್ನು 660 ಕ್ಕೆ ಮತ್ತು ನೀಟ್ ಪರೀಕ್ಷಾ ಕೇಂದ್ರಗಳನ್ನು 546 ಕ್ಕೆ ಏರಿಸಲಾಗುವುದು ಎಂದು ತಿಳಿಸಿದೆ.
ಜೆಇಇ ಪರೀಕ್ಷೆ ಸೆ. 1 ರಿಂದ 6 ರ ವರೆಗೆ ನಡೆಯಲಿದ್ದರೆ, ನೀಟ್ ಸೆ. 13 ರಂದು ನಡೆಯಲಿದೆ. ಜೆಇಇ ಪರೀಕ್ಷೆಗೆ 8.58 ಲಕ್ಷ ಮತ್ತು ನೀಟ್ಗೆ 15.97 ಲಕ್ಷ ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.