ಬೆಂಗಳೂರು: ನವೆಂಬರ್ ತಿಂಗಳ 19 ರಿಂದ 21 ರವರೆಗೆ ಬೆಂಗಳೂರು ಟೆಕ್ ಸಮಿಟ್ (ಬೆಂಗಳೂರು ತಂತ್ರಜ್ಞಾನ ಶೃಂಗಸಭೆ) ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಪ್ರತಿನಿಧಿಗಳ ಜೊತೆಗೆ ವರ್ಚುವಲ್ ಸಭೆ ನಡೆಸಿದ ಅವರು, ಇದಕ್ಕೆ ಬೇಕಾದ ರೂಪುರೇಶೆಗಳನ್ನು ಹಾಕಿಕೊಳ್ಳುವುದಾಗಿಯೂ ಮಾಹಿತಿ ನೀಡಿದ್ದಾರೆ. ರಾಜ್ಯದ ಸರ್ವತೋಮುಖ ಬೆಳವಣಿಗೆಯಲ್ಲಿ ತಂತ್ರಜ್ಞಾನದ ಪಾಲೂ ಇದೆ. ಪ್ರಸ್ತುತ ರಾಜ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಈ ಶೃಂಗಸಭೆ ಮುಖ್ಯವಾಗಲಿದ್ದು, ಬೆಂಗಳೂರು ಟೆಕ್ ಸಮಿಟ್ ಸಹ ಇದಕ್ಕೆ ಪೂರಕ ಕೊಡುಗೆಗಳನ್ನು ನೀಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಸಂದರ್ಭದಲ್ಲಿ ತಂತ್ರಜ್ಞಾನಗಳ ಮೂಲಕವೇ ಹೆಚ್ಚಿನ ಜನರನ್ನು ಶೀಘ್ರ ತಲುಪಿ, ಪರಿಸ್ಥಿತಿ ನಿಯಂತ್ರಣ ಮಾಡಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನ ಕೇವಲ ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿಲ್ಲ. ಬದಲಾಗಿ ಹಳ್ಳಿ ಹಳ್ಳಿಗಳ ಮೂಲೆ ಮೂಲೆಯಲ್ಲಿಯೂ ತಂತ್ರಜ್ಞಾನ ಬಳಕೆ ಆರಂಭವಾಗಿದೆ. ಇದರ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.