ವಾಷಿಂಗ್ಟನ್: ಅಮೆರಿಕಾದ ಪ್ರತಿಷ್ಠಿತ ನೌಕಾಯುದ್ಧ ತರಬೇತಿ ಕಾಲೇಜಿಗೆ ಭಾರತೀಯ ಪ್ರತಿನಿಧಿಯಾಗಿ ಕೊಡಗು ಮೂಲದ ಲೆ. ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅವರು ಆಯ್ಕೆಯಾಗಿದ್ದಾರೆ.
ಅಮೆರಿಕಾ ದೇಶದಲ್ಲಿ ನಡೆಯಲಿರುವ ನೌಕಾಯುದ್ಧ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳು ಆಯ್ಕೆಯಾಗಿದ್ದು, ಅವರಲ್ಲಿ ಭಾರತದ ಪ್ರತಿನಿಧಿಯಾಗಿ ಸೂರಜ್ ಆಯ್ಕೆಯಾಗಿದ್ದಾರೆ. ಇವರು ಮಡಿಕೇರಿಯ ಗೋಣಿಕೊಪ್ಪದ ಅರ್ವತೋಕ್ಲುವಿನ ನಿವೃತ್ತ ಲೆ. ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ.
ಸೂರಜ್ ಅವರು ಡೆಹ್ರಾಡೂನ್ನ ರಾಷ್ಟ್ರೀಯ ಮಿಲಿಟರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ನಾವಲ್ ಅಕಾಡೆಮಿಯಿಂದ ‘ಅಕಾಡೆಮಿ ಕೆಡೆಟ್ ಕ್ಯಾಪ್ಟನ್’ ಪದವಿ ಪಡೆದಿದ್ದಾರೆ. 2010 ರಲ್ಲಿ ಭಾರತೀಯ ನೌಕಾದಳದ ಅಧಿಕಾರಿಯಾಗಿಯೂ ಆಯ್ಕೆಯಾಗಿದ್ದರು. ‘ಚೀಫ್ ಆಫ್ ನೇವಲ್ ಸ್ಟಾಪ್’ ಬಂಗಾರದ ಪದಕವನ್ನು ಪಡೆದಿದ್ದಾರೆ. 2010ರಲ್ಲಿ ನೌಕಾ ಪಡೆಯ ಉತ್ಕೃಷ್ಠ ಕಾರ್ಯ ನಿವಾಹಕ ಪಡೆಯ ಅಧಿಕಾರಿಯಾಗಿ, ಕಮಾಂಡಿಂಗ್ ಆಫಿಸರ್, ನೇವಲ್ ಅಕಾಡೆಮಿಯ ಬೋಧಕರಾಗಿಯೂ ಸೂರಜ್ ಅವರು ಸೇವೆ ಸಲ್ಲಿಸಿದ್ದಾರೆ. 2016 ರಲ್ಲಿ ವಿಶಾಖಪಟ್ಟಣದಲ್ಲಿ ರಾಷ್ಟ್ರಪತಿಗಳಿಂದ ಗಾರ್ಡ್ ಆಫ್ ಹಾನರ್ ಗೌರವವನ್ನು ಇವರು ಪಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.