ನವದೆಹಲಿ: ಸೆಪ್ಟೆಂಬರ್ನಲ್ಲಿ ನಿಗದಿಯಾಗಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳಾದ ಜೆಇಇ-ಮೇನ್ಸ್ ಮತ್ತು ನೀಟ್ಗೆ ಈಗಾಗಲೇ 14 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆ ಎರಡು ಪರೀಕ್ಷೆಗಳನ್ನು ಮುಂದೂಡಬೇಕೆಂಬ ಕೂಗು ಹೆಚ್ಚುತ್ತಿರುವ ಮಧ್ಯೆಯೆ ಎನ್ಟಿಎ ಬುಧವಾರ ನೀಟ್ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.
“ನೀಟ್ಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಾಗಿದೆ ಮತ್ತು ಮೂರು ಗಂಟೆಗಳಲ್ಲಿ ನಾಲ್ಕು ಲಕ್ಷ ವಿದ್ಯಾರ್ಥಿಗಳು ಇದನ್ನು ಈಗಾಗಲೇ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಸಂಜೆಯ ವೇಳೆಗೆ ಈ ಸಂಖ್ಯೆ 6.84 ಲಕ್ಷಕ್ಕೆ ಸಂಖ್ಯೆ ಏರಿತು. ಶೇಕಡಾ 99 ರಷ್ಟು ಅಭ್ಯರ್ಥಿಗಳು ತಮ್ಮ ಮೊದಲ ಆಯ್ಕೆಯ ಕೇಂದ್ರ ನಗರಗಳನ್ನು ಪಡೆಯುವುದನ್ನು ನಾವು ಖಚಿತಪಡಿಸಿದ್ದೇವೆ, “ಎನ್ಟಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್-ಯುಜಿ) ಒಟ್ಟು 15.97 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
“8.58 ಲಕ್ಷದಲ್ಲಿ ಒಟ್ಟು 7.41 ಲಕ್ಷ ಅಭ್ಯರ್ಥಿಗಳು ಬುಧವಾರ ತನಕ ಜೆಇಇ-ಮೇನ್ಸ್ಗಾಗಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಕೇವಲ 332 ಅಭ್ಯರ್ಥಿಗಳು ತಮ್ಮ ಕೇಂದ್ರವನ್ನು ಬದಲಾಯಿಸುವಂತೆ ಕೋರಿದ್ದಾರೆ, ಇದನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.
ಜಂಟಿ ಪ್ರವೇಶ ಪರೀಕ್ಷೆ (ಜೆಇಇ) -ಮೇನ್ಸ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸೆಪ್ಟೆಂಬರ್ 1-6 ರಿಂದ ನಿಗದಿಯಾಗಿದೆ.
ನಿರ್ಣಾಯಕ ಪರೀಕ್ಷೆಗಳನ್ನು ಮುಂದೂಡುವ ಕೂಗು ಜೋರಾಗಿ ಬಂದರೂ, ಶಿಕ್ಷಣ ಸಚಿವಾಲಯದ (ಎಂಒಇ) ಅಧಿಕಾರಿಗಳು ಸೆಪ್ಟೆಂಬರ್ನಲ್ಲಿ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಪುನರುಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.