ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಹಳೆಯ, ನಿರುಪಯುಕ್ತ ಎಂದೆನಿಸಿದ ಬಸ್ಸುಗಳನ್ನು ಬಳಕೆ ಮಾಡಿ ನಿರ್ಮಿಸಲಾಗಿರುವ ಸುಸಜ್ಜಿತ ‘ಸ್ತ್ರೀ ಶೌಚಾಲಯ’ ವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಾಮಾಜಿಕ ಕಳಕಳಿ ಯೋಜನೆಯಡಿ ನೀಡಿದೆ. ಬಸ್ಸು ನಿಲ್ದಾಣಗಳನ್ನು ಮತ್ತು ಸರ್ಕಾರಿ ಬಸ್ಸುಗಳನ್ನು ಮಹಿಳಾ ಸ್ನೇಹಿಯನ್ನಾಗಿಸುವ ನಿಟ್ಟಿನಲ್ಲಿ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸ್ವಚ್ಛತೆಯ ವಿಚಾರದಲ್ಲಿ ರಾಜ್ಯದ ಸಾರಿಗೆ ನಿಗಮ ಇಟ್ಟಿರುವ ದಿಟ್ಟ ಹೆಜ್ಜೆ ಇದಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದ ಸಾರಿಗೆ ನಿಗಮಗಳಲ್ಲಿ ಇಂತಹ ಅನುಪಯುಕ್ತ ಬಸ್ಸುಗಳ ಶೌಚಾಲಯವನ್ನು ಮೊದಲ ಬಾರಿಗೆ ನಿರ್ಮಿಸಿದ ಕೀರ್ತಿ ಕೆಎಸ್ಆರ್ಟಿಸಿಯದ್ದು. ಇದಕ್ಕಾಗಿ 12 ಲಕ್ಷ ರೂ. ಗಳನ್ನು ಬಳಕೆ ಮಾಡಲಾಗಿದೆ. ಈ ಶೌಚಾಲಯದಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಅಳವಡಿಸಲಾಗಿದೆ. ಮಕ್ಕಳಿಗೆ ಹಾಲೂಡಲು ಅವಕಾಶ ,ಸ್ಯಾನಿಟರಿ ನ್ಯಾಪ್ಕಿನ್ ವಿಸರ್ಜನೆಗೆ ವ್ಯವಸ್ಥೆ, ಸೋಲಾರ್ ದೀಪಗಳು, ವಾಷ್ ಬೇಸಿನ್ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಅಳವಡಿಸಿರುವುದಾಗಿ ಸವದಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.