ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ದುಡಿಯುತ್ತಿರುವ ಸಂಚಾರಿ ಪೊಲೀಸರಿಗೆ ರಿಲಾಯನ್ಸ್ ಫೌಂಡೇಶನ್ ಮತ್ತು ರಿಲಾಯನ್ಸ್ ಇನ್ಫೋಕಾಂ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ಗಳನ್ನು ದೇಣಿಗೆ ನೀಡಿ ಗೌರವಿಸಲಾಯಿತು.
ಬೆಂಗಳೂರು ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಸಂಚಾರಿ ಪೊಲೀಸರಿಗೆ 50,000 ಎನ್ 95 ಮಾಸ್ಕ್, 50,000 ಸ್ಯಾನಿಟೈಸರ್ ನೀಡಿ ರಿಲಾಯನ್ಸ್ ಸಂಸ್ಥೆ ಅವರ ಸೇವೆಗೆ ಅಭಿನಂದನೆ ಸಲ್ಲಿಸಿತು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಬದುಕನ್ನೇ ಪಣಕ್ಕಿಟ್ಟು ದುಡಿಯುವ ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಕಮಿಷನರ್ ಕಮಲ್ ಪಂಥ್, ಬೆಂಗಳೂರು ಸಂಚಾರಿ ಪೊಲೀಸ್ ಜಂಟಿ ಕಮಿಷನರ್ ರವಿಕಾಂತೇ ಗೌಡ, ರಾಜ್ಯದ ರಿಲಾಯನ್ಸ್ ಜಿಯೋ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮಿತಾಬ್ ಭಾಟಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.