ನವದೆಹಲಿ: ರಕ್ಷಣಾ ಸಚಿವಾಲಯದ ರಕ್ಷಣಾ ಇಲಾಖೆ (ಡಿಒಡಿಪಿ) ಬುಧವಾರ ಏಷ್ಯಾದ ಅತಿದೊಡ್ಡ ವಾಯು ಪ್ರದರ್ಶನವಾಗಿರುವ ಏರೋ ಇಂಡಿಯಾದ 13ನೇ ಆವೃತ್ತಿಯನ್ನು ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಮುಂದಿನ ವರ್ಷದ ಫೆಬ್ರವರಿ 3ರಿಂದ 5ರನಡುವೆ ನಡೆಸಲಾಗುವುದು ಎಂದು ಘೋಷಿಸಿದೆ.
ಎರಡು ವರ್ಷಗಳಿಗೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನವನ್ನು 2021ರ ಫೆಬ್ರವರಿಯಲ್ಲಿ ನಡೆಸಲು ಸಚಿವಾಲಯ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ದೇಶೀಯ ರಕ್ಷಣಾ ಉದ್ಯಮ ಮತ್ತು ಜಾಗತಿಕ ವೈಮಾನಿಕ ಸಂಸ್ಥೆಗಳ ಆಶಯದಂತೆ ಇದನ್ನು ಎರಡು ವರ್ಷಗಳಿಗೊಮ್ಮೆ ಬೆಂಗಳೂರಿನಲ್ಲಿ ನಡೆಸಲಾಗುತ್ತದೆ.
1996 ರಲ್ಲಿ ಮೊದಲ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಪ್ರಾರಂಭವಾದಾಗಿನಿಂದ ಬೆಂಗಳೂರಿನಲ್ಲೇ ಈ ಕಾರ್ಯಕ್ರಮ ನಡೆಯುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ಈ ಬಗ್ಗೆ ಹಲವಾರು ಸಭೆಗಳನ್ನು ನಡೆಸಿ ಚರ್ಚಿಸಿದ್ದಾರೆ ಮೂಲಗಳು ತಿಳಿಸಿವೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡು ಏರೋ ಇಂಡಿಯಾವನ್ನು ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ದೇಶ-ವಿದೇಶಗಳ ಹಲವಾರು ಜಾಗತಿಕ ಉತ್ಪಾದನಾ ಕಂಪನಿಗಳು ಪ್ರತಿ ವರ್ಷ ಇದರಲ್ಲಿ ಭಾಗಿಯಾಗುತ್ತವೆ. ಸರ್ಕಾರಗಳ ಅಧಿಕೃತ ನಿಯೋಗಗಳೂ ಆಗಮಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.