ನವದೆಹಲಿ: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಆನ್ಲೈನ್ ಡ್ಯಾಶ್ಬೋರ್ಡ್ ಅನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದೆ. ಇದಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಚಾಲನೆ ನೀಡಿದರು.
“ಆನ್ಲೈನ್ ಡ್ಯಾಶ್ಬೋರ್ಡ್ ಕ್ರಿಯಾತ್ಮಕ, ಸಂವಾದಾತ್ಮಕವಾಗಿದೆ ಮತ್ತು ಮಾಹಿತಿಗಾಗಿ ಹುಡುಕುತ್ತಿರುವ ಎಲ್ಲರಿಗೂ ಒನ್ ಸ್ಟೆಪ್ ಪರಿಹಾರವನ್ನು ನೀಡುತ್ತದೆ ಮತ್ತು ನಗರ ಮಟ್ಟದವರೆಗಿನ ಪಿಎಂ ಸ್ವನಿಧಿ ಪ್ರಗತಿಯನ್ನು ಪತ್ತೆಹಚ್ಚುತ್ತದೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜುಲೈ 2, 2020 ರಂದು ಪಿಎಂ ಸ್ವನಿಧಿ ಪೋರ್ಟಲ್ನಲ್ಲಿ ಆನ್ಲೈನ್ನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದಾಗಿನಿಂದ, 7.15 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.70 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪಿಎಂ ಸ್ವನಿಧಿ ಯೋಜನೆಯನ್ನು ‘ಆತ್ಮ ನಿರ್ಭರ ಭಾರತ ಅಭಿಯಾನ’ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾಗಿದೆ. ಕೋವಿಡ್-19 ಲಾಕ್ಡೌನ್ ನಂತರ ತಮ್ಮ ವ್ಯವಹಾರಗಳನ್ನು ಪುನರಾರಂಭಿಸಲು ಸುಮಾರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ 1 ವರ್ಷದ ಅವಧಿಯಲ್ಲಿ 10,000 ರೂ.ವರೆಗೆ ಆಧಾರವಿಲ್ಲದೆಯೇ ಮುಕ್ತ ಕಾರ್ಯ ಬಂಡವಾಳ ಸಾಲವನ್ನು ಒದಗಿಸಲು ಇದು ಉದ್ದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.