ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ವಧಿಸಲಾಗಿದೆ.
ರಾಜ್ಯದ ಪುಲ್ವಾಮಾ ಜಿಲ್ಲೆಯ ಝಡೂರ ಪ್ರದೇಶದಲ್ಲಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಜಮ್ಮು ಕಾಶ್ಮೀರದ ಪೊಲೀಸ್ ಪಡೆ, ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಸಂಹಾರವಾಗಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸೇನಾ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಮುಂಜಾವಿನ ವೇಳೆ 1 ಗಂಟೆಯ ಸುಮಾರಿಗೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಮೂವರು ಉಗ್ರಗಾಮಿಗಳನ್ನು ಹತ್ಯೆ ಮಾಡಿರುವುದಾಗಿ ಸೇನೆ ಮಾಹಿತಿ ನೀಡಿದೆ. ಕಾರ್ಯಾಚರಣೆಯ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅ. 28 ರಂದು ರಾಜ್ಯದಲ್ಲಿ ನಾಲ್ವರು ಉಗ್ರರನ್ನು ವಧಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಜಮ್ಮು ಕಾಶ್ಮೀರದ ಖಾನ್ಮೋಹ್ನ ಸರಪಂಚ್ ನನ್ನು ಅಪಹರಣ ಮಾಡಿ, ಕೊಲೆ ಮಾಡಿದ್ದ ಉಗ್ರಗಾಮಿ ಸುಹೈಲ್ ಭಟ್ ಸೇರಿದಂತೆ ನಾಲ್ವರನ್ನು ಯೋಧರು ವಧಿಸಿದ್ದರು. ಈ ಸಂದರ್ಭದಲ್ಲಿ ಉಗ್ರನೋರ್ವ ಸೇನೆಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಕಳೆದ 24 ಗಂಟೆಗಳಲ್ಲಿ 7 ಉಗ್ರಗಾಮಿಗಳನ್ನು ಭಾರತದ ಭದ್ರತಾ ಪಡೆಗಳ ಸಿಬ್ಬಂದಿ ಸಂಹರಿಸಿದ್ದಾಗಿಯೂ ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.