ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾ ಸಂಘಟನೆಯ ಪುನಃಶ್ಚೇತನ ಹಾಗೂ ಉಗ್ರ ಕೃತ್ಯಗಳನ್ನು ನಡೆಸಲು ಹೂಡಿದ್ದ ಸಂಚನ್ನು ಭೇದಿಸಿರುವ ಪೊಲೀಸರು ಮೂವರು ಉಗ್ರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಪೊಲೀಸರ ವಶದಲ್ಲಿದ್ದು ತನಿಖೆ ಎದುರಿಸುತ್ತಿರುವ ಉಗ್ರ ಸಂಘಟನೆಯ ಸದಸ್ಯರು ಪಾಕಿಸ್ಥಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐನ ಮೊಹಮ್ಮದ್ ಖಾಸಿಂ ಎಂಬಾತನ ನಿಕಟವರ್ತಿಗಳಾಗಿದ್ದು, ಸಂಪರ್ಕ ಹೊಂದಿದ್ದರು ಎಂದು ವಿಚಾರಣೆಯ ವೇಳೆ ತಿಳಿದು ಬಂದಿರುವುದಾಗಿ ರಿಯಾಸಿ ಪ್ರದೇಶದ ಎಸ್ಎಸ್ಪಿ ರಶ್ಮಿ ವಾಜಿರ್ ಅವರು ಮಾಹಿತಿ ನೀಡಿದ್ದಾರೆ.
ಉಗ್ರಗಾಮಿಗಳು ಭಾರತದೊಳಕ್ಕೆ ಅಕ್ರಮವಾಗಿ ನುಸುಳುವ ಸಂದರ್ಭದಲ್ಲಿ ಸದ್ಯ ಬಂಧನಕ್ಕೆ ಒಳಪಟ್ಟಿರುವವರ ಸಹಾಯ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯೂ ಸೇರಿದಂತೆ 11 ಜನರ ಮೇಲೆ ಶಂಕೆ ಇದ್ದು, ಮಹಿಳೆ ಪಾಕಿಸ್ಥಾನದಲ್ಲಿ ಖಾಸಿಂನನ್ನು ಭೇಟಿಯಾಗಿ ಹಣ ಪಡೆದುಕೊಂಡಿರುವುದಾಗಿಯೂ ತಿಳಿದು ಬಂದಿದೆ. ಈಗಾಗಲೇ ಬಂಧಿಸಲ್ಪಟ್ಟಿರುವವರಲ್ಲಿ ಸರ್ಕಾರಿ ಉದ್ಯೋಗಿಗಳೂ ಇದ್ದು, ಆರೋಪಿಗಳ ಬ್ಯಾಂಕ್ ಖಾತೆ ಪರಿಶೀಲನೆ ಮಾಡಲಾಗಿದೆ. ಅವರು ನ್ಯಾಯ ಸಮ್ಮತವಲ್ಲದ ಕೆಲಸಗಳನ್ನು ನಡೆಸಿರುವುದೂ ಬೆಳಕಿಗೆ ಬಂದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಇನ್ನೂ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.