ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವ್ಯಸನಕ್ಕೆ ಸಂಬಂಧಿಸಿದಂತೆ ಈಗಾಗಲೇ ದೊಡ್ಡ ಮಟ್ಟಿನಲ್ಲಿ ಕೋಲಾಹಲ ಎದ್ದಿದ್ದು, ರಾಜ್ಯದಲ್ಲಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಪೂರಕ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಡ್ರಗ್ಸ್ ನಿಯಂತ್ರಣ ಸಂಬಂಧ ಹಮ್ಮಿಕೊಳ್ಳಲಾದ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆಯನ್ನು ನಡೆಸಲಾಗಿರುವುದಾಗಿ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಗೃಹ ಇಲಾಖೆಯ ಬಳಿಯೂ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಮಾಹಿತಿಗಳಿದ್ದು, ಲಭ್ಯವಿರುವ ಎಲ್ಲಾ ಮಾಹಿತಿಗಳನ್ನು ಆಧಾರವಾಗಿಟ್ಟುಕೊಂಡು ಈ ಮಹಾಮಾರಿಯ ನಿಯಂತ್ರಣಕ್ಕೆ ಪೂರಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಪೊಲೀಸರಿಗೆ ಅವರು ತಿಳಿಸಿದ್ದಾರೆ.
ರಾಜ್ಯದ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಿ, ಅದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ ಪೂರಕ ಕ್ರಮ ಕೈಗೊಳ್ಳಲಿರುವ ಭರವಸೆಯನ್ನೂ ಅವರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿಗಳಿದ್ದರೆ ಪೊಲೀಸರಿಗೆ ತಿಳಿಸುವಂತೆಯೂ ಗೃಹ ಸಚಿವರು ಮನವಿ ಮಾಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಈಗಾಗಲೇ 1438 ಡ್ರಗ್ಸ್ ಮಾಫಿಯಾ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, 1792 ಜನರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.