ನವದೆಹಲಿ: ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರಕ್ಕೆ ಮೋದಿ ಸರ್ಕಾರ ಬದ್ಧತೆಯನ್ನು ತೋರಿಸಿದೆ. ನಿಗದಿಯಂತೆ ಸೆಪ್ಟಂಬರ್ 1ರಿಂದ 6ರ ನಡುವೆ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆ ಬರೆಯಲು ಹಾಜರಾಗುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಂದಾಗಿದೆ.
ಆರ್ಎಸ್ಎಸ್ಗೆ ಸಂಬಂಧಿಸಿದ ಮೂಲಗಳ ಪ್ರಕಾರ, ಸಂಘವು ಇದಕ್ಕಾಗಿ ಅಧಿಕೃತ ಅಭಿಯಾನವನ್ನು ಪ್ರಾರಂಭಿಸದಿದ್ದರೂ, ಅದರ ಸ್ಥಳೀಯ ಘಟಕಗಳನ್ನು ಸಕ್ರಿಯಗೊಳಿಸಲಾಗಿದೆ ಮತ್ತು ಪ್ರಸ್ತುತ ಪರಿಸ್ಥಿತಿಯ ಮೇಲೆ ಅದು ಕಣ್ಣಿಟ್ಟಿದೆ. ವಸತಿ, ಸಾರಿಗೆ ಮತ್ತು ವಿದ್ಯಾರ್ಥಿಗಳಿಗೆ ಆಹಾರ ಪ್ಯಾಕೆಟ್ಗಳನ್ನು ವಿತರಿಸುವ ಬಗ್ಗೆ ಕಾಳಜಿ ವಹಿಸುವಂತೆ ಆರ್ಎಸ್ಎಸ್ ತನ್ನ ರಾಜ್ಯ ಮತ್ತು ಜಿಲ್ಲಾ ಘಟಕಗಳಿಗೆ ನಿರ್ದೇಶಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೆಇಇ ಮೇನ್ಸ್ 2020 ಅನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ನಡೆಸಲಿದ್ದು, ರಾಷ್ಟ್ರೀಯ ಪ್ರವೇಶ ಕಮ್ ಅರ್ಹತಾ ಪರೀಕ್ಷೆ (ನೀಟ್) ಸೆಪ್ಟೆಂಬರ್ 13 ರಂದು ನಡೆಯಲಿದೆ.
“ನಮ್ಮ ಸ್ಥಳೀಯ ಘಟಕಗಳು ಪ್ರಸ್ತುತ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿವೆ. ಪ್ರವಾಹದಿಂದಾಗಿ ಹಲವಾರು ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಯಾಣ ಕಷ್ಟವಾಗುತ್ತಿದೆ. ನಮ್ಮ ಸ್ಥಳೀಯ ಘಟಕಗಳು ಅವರಿಗೆ ಸಹಾಯ ಮಾಡುತ್ತಿವೆ. ಲಾಕ್ ಡೌನ್ ಕಾರಣ ಹಲವಾರು ವಿದ್ಯಾರ್ಥಿಗಳು ತಮ್ಮ ಹಳ್ಳಿಗಳಿಗೆ ಅಥವಾ ಪಟ್ಟಣಗಳಿಗೆ ಹಿಂದಿರುಗಿದ್ದಾರೆ. ನಾವು ಅವರಿಗೂ ಸಹಾಯ ಮಾಡುತ್ತಿದ್ದೇವೆ. ಇದೇ ಸಮಯದಲ್ಲಿ, ಹಣದ ಕೊರತೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ, ನಮ್ಮ ಘಟಕಗಳು ಅದನ್ನು ಸಹ ನೋಡಿಕೊಳ್ಳುತ್ತವೆ” ಎಂದು ಹಿರಿಯ ಆರ್ಎಸ್ಎಸ್ ಸ್ವಯಂಸೇವಕರೊಬ್ಬರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.