ನವದೆಹಲಿ: ಭಾರತವು ಕೋವಿಡ್-19 ಪರೀಕ್ಷೆಯನ್ನು ವ್ಯಾಪಕವಾಗಿ ನಡೆಸುತ್ತಿದ್ದು, ಇದರಿಂದಾಗಿ ಪರೀಕ್ಷೆಯ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ. ದೇಶದಲ್ಲಿ ನಡೆದ ಒಟ್ಟು ಪರೀಕ್ಷೆಗಳ ಸಂಖ್ಯೆ ಇಂದು 4.23 ಕೋಟಿ ದಾಟಿವೆ. ಕಳೆದ 24 ಗಂಟೆಗಳಲ್ಲಿ 8,46,278 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
2020ರ ಜನವರಿಯಲ್ಲಿ ಪುಣೆಯ ಪ್ರಯೋಗಾಲಯದಲ್ಲಿ ಒಂದು ಪರೀಕ್ಷೆಯಿಂದ ಪ್ರಾರಂಭವಾದ ಭಾರತದ ದೈನಂದಿನ ಪರೀಕ್ಷಾ ಸಾಮರ್ಥ್ಯವು 2020 ರ ಆಗಸ್ಟ್ನಲ್ಲಿ 10 ಲಕ್ಷಕ್ಕೂ ಅಧಿಕವಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 78,512 ಕೊರೋನಾ ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇ.70 ರಷ್ಟು ಏಳು ರಾಜ್ಯಗಳಿಂದ ದಾಖಲಾಗಿವೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಗರಿಷ್ಠ ಸುಮಾರು ಶೇ.21 ರಷ್ಟು ಪ್ರಕರಣಗಳು ವರದಿಯಾಗಿವೆ. ಆಂಧ್ರಪ್ರದೇಶ (ಶೇ.13.5), ಕರ್ನಾಟಕ (ಶೇ.11.27) ಮತ್ತು ತಮಿಳುನಾಡಿನಲ್ಲಿ ಶೇ.8.27 ರಷ್ಟು ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶ ಶೇ.8.27, ಪಶ್ಚಿಮ ಬಂಗಾಳ ಶೇ.3.85 ಮತ್ತು ಒಡಿಶಾದಲ್ಲಿ ಶೇ.3.84 ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.43 ಪ್ರಕರಣಗಳು ಕೇವಲ ಮೂರು ರಾಜ್ಯಗಳಲ್ಲಿ ಅಂದರೆ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ದಾಖಲಾಗಿವೆ. ಒಟ್ಟು ಪ್ರಕರಣಗಳಲ್ಲಿ ಶೇ.11.66 ರಷ್ಟು ತಮಿಳುನಾಡಿನಲ್ಲಿ ವರದಿಯಾಗಿವೆ.
ಕೋವಿಡ್-19 ರಿಂದಾಗಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಸಾವುಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಸುಮಾರು ಶೇ.50 ರಷ್ಟಿವೆ. ಮಹಾರಾಷ್ಟ್ರವು ಶೇ.30.48 ರಷ್ಟು ಸಾವುಗಳನ್ನು ದಾಖಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.