ಬೆಂಗಳೂರು: ರಾಜ್ಯದಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ನಿರ್ಮಿಸಲಾಗುವುದು. ಈ ಯೋಜನೆಗೆ ಹಣಕಾಸು ಇಲಾಖೆಯ ಅನುಮೋದನೆಯೂ ಶೀಘ್ರದಲ್ಲೇ ದೊರೆಯಲಿದ್ದು, ಆ ಬಳಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.
ಅವರು ಬಳ್ಳಾರಿಯಲ್ಲಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಟ್ರೊಮ ಕೇರ್ ಸೆಂಟರ್ ಅನ್ನು ವೆಬಿನಾರ್ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪಿಎಂ ನರೇಂದ್ರ ಮೋದಿ ಅವರ ಕನಸಿನಂತೆ ದೇಶದ ವಿವಿಧ ಭಾಗಗಳಲ್ಲಿ 22 ಏಮ್ಸ್ ಆಸ್ಪತ್ರೆಗಳನ್ನುಆರಂಭಿಸಲು ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 7 ಆಸ್ಪತ್ರೆಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಬಿಟ್ಟುಕೊಡಲಾಗಿದೆ ಎಂದು ಅವರು ಹೇಳಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದಂದಿನಿಂದ ಈ ವರೆಗೆ ಕೇವಲ ಒಂದು ಏಮ್ಸ್ ಆಸ್ಪತ್ರೆ ಮಾತ್ರ ಕಾರ್ಯ ನಿರ್ವಹಿಸುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ಬಿಜೆಪಿಯ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ಟ್ರೊಮ ಕೇರ್ ಸೆಂಟರ್ ಆರಂಭಿಸಲು ಮಂಜೂರಾತಿ ನೀಡಿದ್ದರು ಎಂದು ಹರ್ಷವರ್ಧನ್ ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ 57 ವೈದ್ಯಕೀಯ ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಜೊತೆಗೆ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಈ ವರ್ಷ ರಾಜ್ಯದ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಯಾದಗಿರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡುವುದಾಗಿಯೂ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.