ನವದೆಹಲಿ: 1984 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್ ಅವರನ್ನು ಭಾರತದ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಚುನಾವಣಾ ಆಯುಕ್ತ ಅಶೋಕ್ ಲವಾಸಾ ರಾಜೀನಾಮೆಯಿಂದ ತೆರವಾಗಿದ್ದ ಚುನಾವಣಾ ಆಯುಕ್ತ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ನೇಮಿಸಲಾಗಿದೆ. ಇದೇ ಆಗಸ್ಟ್ 31ಕ್ಕೆ ಲವಾಸಾ ಸೇವೆ ಅಂತ್ಯವಾಗಿದ್ದು, ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲವಾಸಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
ಕುಮಾರ್ ಅವರು ಫೆಬ್ರವರಿಯಲ್ಲಿ ಹಣಕಾಸು ಕಾರ್ಯದರ್ಶಿಯಾಗಿ ನಿವೃತ್ತರಾದರು. ಅವರು ಸರ್ಕಾರದಲ್ಲಿ ಮೂರು ದಶಕಗಳ ಅಧಿಕಾರಾವಧಿಯಲ್ಲಿ, ಕೇಂದ್ರದಲ್ಲಿ ಮತ್ತು ಬಿಹಾರ / ಜಾರ್ಖಂಡ್ನ ರಾಜ್ಯ ಕೇಡರ್ನಲ್ಲಿ ವಿವಿಧ ಸಚಿವಾಲಯಗಳೊಂದಿಗೆ ಕೆಲಸ ಮಾಡಿದ್ದಾರೆ.
ಹಣಕಾಸು ಕಾರ್ಯದರ್ಶಿಯಾಗಿ ನಿವೃತ್ತಿಯಾದ ನಂತರ, ಕುಮಾರ್ ಅವರನ್ನು ಏಪ್ರಿಲ್ 2020 ರಿಂದ ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುವವರೆಗೂ ಈ ಹುದ್ದೆಯನ್ನು ಅವರು ಅಲಂಕರಿಸಿದ್ದರು.
‘ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. 2020ರ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ’ ಎಂದು ಕಾನೂನು ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ಕುಮಾರ್ ಅವರು ಮಾಸ್ಟರ್ ಆಫ್ ಪಬ್ಲಿಕ್ ಪಾಲಿಸಿ ಮತ್ತು ಸಸ್ಟೈನೆಬಿಲಿಟಿ ಜೊತೆಗೆ ಬಿಎಸ್ಸಿ ಮತ್ತು ಎಲ್ಎಲ್ಬಿ ಪದವಿಗಳನ್ನು ಪಡೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.