ವಾಷಿಂಗ್ಟನ್: ಈ ವರ್ಷದ ಅಂತ್ಯದಲ್ಲಿ ಅಮೆರಿಕಾ ದೇಶದ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅದಕ್ಕೂ ಮೊದಲೇ ಭಾರತ ಮತ್ತು ಅಮೆರಿಕ ನಡುವೆ ಕಿರು ವ್ಯಾಪಾರ ಒಪ್ಪಂದ ನಡೆಯುವ ಸಾಧ್ಯತೆಗಳಿವೆ ಎಂದು ಅಮೆರಿಕದ ಆಂತರಿಕ ವ್ಯವಹಾರಗಳ ಸಹಾಯಕ ಸಚಿವ ಸ್ಟೀಫನ್ ಬೇಗನ್ ಮಾಹಿತಿ ನೀಡಿದ್ದಾರೆ.
ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಫೋರಂ ವತಿಯಿಂದ ನಡೆಸಲಾದ ಇಂಡಿಯೋ-ಯು.ಎಸ್. ಲೀಡರ್ಶಿಫ್ ಸಮಿಟ್ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡುವ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ.
ಭಾರತ ಮತ್ತು ಅಮೆರಿಕ ದೇಶಗಳ ನಡುವೆ ವ್ಯಾಪಾರ ವಹಿವಾಟುಗಳಿಗೆ ಸಂಬಂಧಿಸಿದಂತೆ ಕೆಲವೊಂದು ಭಿನ್ನಾಭಿಪ್ರಾಯಗಳಿವೆ. ಉಭಯ ರಾಷ್ಟ್ರಗಳೂ ಆ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುತ್ತಿವೆ. ಭಾರತದ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ನಡುವಿನ ಬಾಂಧವ್ಯ ಚೆನ್ನಾಗಿದ್ದು, ಈ ಹಿನ್ನೆಲೆಯಲ್ಲಿ ಈ ಒಪ್ಪಂದ ಶೀಘ್ರದಲ್ಲೇ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.