ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಸೆ. 22 ರಿಂದ 29 ರ ವರೆಗೆ ನಡೆಯಲಿದ್ದು, ಸೆ.26 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಮಾತನಾಡುವ ಸಾಧ್ಯತೆ ಇದೆ. ಈ ಬಾರಿಯ ಸಭೆಯಲ್ಲಿ ಮಾತನಾಡಲಿರುವ ನಾಯಕರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಈ ಪಟ್ಟಿಯಲ್ಲಿ ಮೋದಿ ಅವರ ಹೆಸರನ್ನು ಸೇರಿಸಲಾಗಿದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಇದೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು, ಈ ಸಭೆಯಲ್ಲಿ ಮಾತನಾಡಲಿರುವ ನಾಯಕರು ಸಭೆಗೂ ಮುನ್ನವೇ ತಮ್ಮ ಭಾಷಣವನ್ನು ವಿಡಿಯೋ ಚಿತ್ರೀಕರಣ ನಡೆಸಿ ಸಾಮಾನ್ಯ ಸಭೆಗೆ ತಲುಪಿಸಲಿದ್ದಾರೆ. ಕೊರೋನಾ ಸಂಕಷ್ಟದ ಕಾರಣದಿಂದಾಗಿ ಈ ರೀತಿಯಲ್ಲಿ ಸಭೆ ನಡೆಸಲು ಮುಂದಾಗಿರುವುದಾಗಿ ವಿಶ್ವಸಂಸ್ಥೆ ಮಾಹಿತಿ ನೀಡಿದೆ.
ಭಾರತದ ಪ್ರಧಾನಿ ಮೋದಿ, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನರೊ, ಅಮೆರಿಕದ ಅಧ್ಯಕ್ಷ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಇರಾನ್ ಅಧ್ಯಕ್ಷ ಹಸನ್ ರೌಹಾನಿ ಮೊದಲಾದವರು ಸೇರಿದಂತೆ ಇನ್ನೂ ಕೆಲವು ದೇಶಗಳ ನಾಯಕರ ಹೆಸರನ್ನು ಈ ತಾತ್ಕಾಲಿಕ ಪಟ್ಟಿಯಲ್ಲಿ ನೀಡಲಾಗಿದೆ. ಈ ಪಟ್ಟಿ ಪರಿಷ್ಕರಣೆಗೆ ಒಳಗಾಗುವ ಸಾಧ್ಯತೆಗಳೂ ಇವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.