ನವದೆಹಲಿ: ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ‘ದೀಕ್ಷಾಂತ್ ಪರೇಡ್ ಕಾರ್ಯಕ್ರಮ’ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
ಈ ಕಾರ್ಯಕ್ರಮ ಶುಕ್ರವಾರ ನಡೆಯಲಿದ್ದು, ಐಪಿಎಸ್ ಪ್ರೊಬೆಷನರಿ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಅಕಾಡೆಮಿಯಲ್ಲಿ 42 ವಾರಗಳ ಮೊದಲ ಹಂತದ ತರಬೇತಿ ಪೂರೈಸಿರುವ 131 ಐಪಿಎಸ್ ಪ್ರೊಬೆಷನರಿ ಅಧಿಕಾರಿಗಳ ಜೊತೆಗೆ ಸಂವಾದ ನಡೆಯಲಿದೆ. ಇವರಲ್ಲಿ 28 ಮಂದಿ ಮಹಿಳಾ ಅಧಿಕಾರಿಗಳೂ ಸೇರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.